ಅಫ್ಘಾನಿಸ್ತಾನ್ ಅಯೋಮಯ; ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ತುರ್ತು ಸಭೆ

ಅಫ್ಘಾನಿಸ್ತಾನ್ ಅಯೋಮಯ; ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ತುರ್ತು ಸಭೆ

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬೆನ್ನಲ್ಲೇ ಇಡೀ ದೇಶದಲ್ಲಿ ವಾತಾವರಣ ಹದಗೆಟ್ಟಿದೆ. ಜನರು ಪ್ರಾಣಭಯದಿಂದ ದೇಶಬಿಡಲು ಮುಂದಾಗಿದ್ದಾರೆ. ಇದೀಗ ಇತರೆ ದೇಶಗಳಿಗೆ ಅಫ್ಘಾನಿಸ್ತಾನದಲ್ಲಿರುವ ತನ್ನ ದೇಶದ ಪ್ರಜೆಗಳನ್ನ ಸುರಕ್ಷಿತವಾಗಿ ತಮ್ಮ ದೇಶಗಳಿಗೆ ಕರೆತರುವುದು ಸವಾಲಾಗಿ ಪರಿಣಮಿಸಿದೆ. ಭಾರತೀಯರನ್ನು ತವರು ನೆಲಕ್ಕೆ ವಾಪಸ್ ಕರೆತರುವ ಸವಾಲು ಇದೀಗ ಭಾರತ ಸರ್ಕಾರದ ಮುಂದಿದೆ.

ಈ ಬೆನ್ನಲ್ಲೇ ಅಫ್ಘಾನಿಸ್ತಾನ ಸ್ಥಿತಿಗತಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಇಲಾಖೆ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

ತಾಲಿಬಾನ್ ಸರ್ಕಾರದ ಜೊತೆಗೆ ಚೀನಾ ಸರ್ಕಾರ ಸ್ನೇಹ ಸಂಬಂಧ ಬೆಳೆಸುವುದಾಗಿ ಹೇಳಿದೆ. ಇನ್ನು ಪಾಕಿಸ್ತಾನದಲ್ಲೂ ಸಾವಿರಾರು ಸಂಖ್ಯೆಯಲ್ಲಿ ತಾಲಿಬಾನಿಗಳು ಐಎಸ್​ಐ ಸಂಘಟನೆಯ ಬಳಿ ಟ್ರೈನಿಂಗ್ ಪಡೆಯುತ್ತಿದ್ದಾರೆ. ಇದರಿಂದ ಭಾರತದ ಭದ್ರತೆಗೂ ಭವಿಷ್ಯದಲ್ಲಿ ಸವಾಲುಗಳು ಎದುರಾಗುವ ಸಾಧ್ಯತೆಗಳಿದ್ದು ಈ ವಿಚಾರವಾಗಿಯೂ ಸಹ ಮಹತ್ವದ ಸಭೆಯಲ್ಲಿ ಚರ್ಚೆಗಳಾಗುವ ಸಾಧ್ಯತೆಗಳಿವೆ.

Source: newsfirstlive.com Source link