BIG BREAKING: ತಾಲಿಬಾನ್​ಗೆ ಮಣಿಯಲ್ಲ.. ನಾನೇ ಆಫ್ಘನ್ ಅಧ್ಯಕ್ಷ- ಉಪಾಧ್ಯಕ್ಷ ಘೋಷಣೆ

BIG BREAKING: ತಾಲಿಬಾನ್​ಗೆ ಮಣಿಯಲ್ಲ.. ನಾನೇ ಆಫ್ಘನ್ ಅಧ್ಯಕ್ಷ- ಉಪಾಧ್ಯಕ್ಷ ಘೋಷಣೆ

ತಾಲಿಬಾಲಿಗಳು ರಾಜಧಾನಿ ಕಾಬೂಲ್ ಸೇರಿದಂತೆ ಬಹುತೇಕ ಅಫ್ಘಾನಿಸ್ತಾನವನ್ನೇ ವಶಕ್ಕೆ ಪಡೆದುಕೊಂಡಿದೆ. ಕಾಬೂಲ್​ನಿಂದ ಅಲ್ಲಿನ ಅಧ್ಯಕ್ಷ ಅಶ್ರಫ್ ಗನಿ ಸೇರಿದಂತೆ ಬಹುತೇಕ ನಾಯಕರು ಪಲಾಯನಗೈದಿದ್ದಾರೆ. ಅಶ್ರಫ್ ಗನಿ ದೇಶವನ್ನೇ ತೊರೆದಿದ್ದಾರೆ. ಇದೆಲ್ಲದರ ಬೆನ್ನಲ್ಲೇ ತಾಲಿಬಾನಿಗಳು ಸರ್ಕಾರ ರಚಿಸಲು ಮುಂದಾಗಿದ್ದಾರೆ.

ಹೀಗಿರುವಾಗಲೂ ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮ್ರುಲ್ಲಾಹ್ ಸಾಲೆಹ್​ ಈಗಲೂ ಸರ್ಕಾರ ನಮ್ಮ ಕೈನಲ್ಲಿದೆ ಎಂಬಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ಅಫ್ಘಾನಿಸ್ತಾನದ ಸಂವಿಧಾನದ ಪ್ರಕಾರ ಅಧ್ಯಕ್ಷರ ಗೈರು, ಪಲಾಯನ, ರಾಜೀನಾಮೆ ಅಥವಾ ಸಾವಿನ ನಂತರ ಉಪಾಧ್ಯಕ್ಷರು ಅಧ್ಯಕ್ಷರಾಗಿ ಭಡ್ತಿ ಹೊಂದುತ್ತಾರೆ. ಸದ್ಯ ನಾನು ದೇಶದ ಒಳಗೇ ಇದ್ದೇನೆ.. ಮತ್ತು ನಾನು ಈಗ ದೇಶದ ಉಸ್ತುವಾರಿ ಅಧ್ಯಕ್ಷನಾಗಿದ್ದೇನೆ. ನಾನು ಎಲ್ಲ ನಾಯಕರನ್ನೂ ಸಂಪರ್ಕಿಸಿ ಅವರ ಬೆಂಬಲ ಹಾಗೂ ಒಮ್ಮತ ಸಂಗ್ರಹಿಸುತ್ತಿದ್ದೇನೆ ಎಂದಿದ್ದಾರೆ.

Source: newsfirstlive.com Source link