ರೈತರನ್ನ ದಲ್ಲಾಳಿಗಳೆಂದ ಅಧಿಕಪ್ರಸಂಗಿ, ಕೂಗುಮಾರಿ ಸಚಿವೆಯ ವಿರುದ್ಧ ಕ್ರಮ ಕೈಗೊಳ್ಳಿ- ಸಿದ್ದರಾಮಯ್ಯ

ರೈತರನ್ನ ದಲ್ಲಾಳಿಗಳೆಂದ ಅಧಿಕಪ್ರಸಂಗಿ, ಕೂಗುಮಾರಿ ಸಚಿವೆಯ ವಿರುದ್ಧ ಕ್ರಮ ಕೈಗೊಳ್ಳಿ- ಸಿದ್ದರಾಮಯ್ಯ

ಬೆಂಗಳೂರು: ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನ ದಲ್ಲಾಳಿಗಳು ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ -ಸಚಿವೆ ಶೋಭಾ ಕರಂದ್ಲಾಜೆ

ಬಿಜೆಪಿ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ‘ದಲ್ಲಾಳಿಗಳು’, ‘ಮಧ್ಯವರ್ತಿಗಳು’ ಎಂದು ಅವಮಾನಿಸಿರುವ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಖಂಡನೀಯ. ಶೋಭ ಕರಂದ್ಲಾಜೆ ಅವರು ತಕ್ಷಣ ತಮ್ಮ ಹೇಳಿಕೆಯನ್ನು ವಾಪಸು ಪಡೆದು, ರೈತರ ಕ್ಷಮೆ ಯಾಚಿಸಬೇಕು. ಶೋಭಾ ಕರಂದ್ಲಾಜೆ ಅವರ ಹೇಳಿಕೆ ಕೇಂದ್ರ ಬಿಜೆಪಿ ಸರ್ಕಾರದ ಅಧಿಕೃತ ನಿಲುವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿಕೊಳ್ಳಬೇಕು. ಇಲ್ಲವಾದರೆ ಈ ಬಗ್ಗೆ ಸ್ಪಷ್ಟನೆ ನೀಡಿ ಅಧಿಕಪ್ರಸಂಗಿ ಸಚಿವೆಯ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸಭೆ ಮಧ್ಯೆಯೇ ಎದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಧಿಕ್ಕಾರ ಕೂಗಿದ ಬಿಜೆಪಿಗರು; ಯಾಕೆ ಗೊತ್ತಾ?

ಕರ್ನಾಟಕದಲ್ಲಿ ಪ್ರೊ. ಎಂ. ಡಿ. ನಂಜುಂಡ ಸ್ವಾಮಿಯವರಂತಹ ಹಿರಿಯರು ಮುನ್ನಡೆಸಿದ್ದ ಕರ್ನಾಟಕದಲ್ಲಿ ರೈತ ಹೋರಾಟಕ್ಕೆ ಹೆಮ್ಮೆಯ ಪರಂಪರೆ ಇದೆ.. ಅದೇನು ಆಧಿಕಾರಕ್ಕಾಗಿ, ಸಚಿವರಾಗಲು ನಡೆಸುವ ದಲ್ಲಾಳಿಗಿರಿ ಹೋರಾಟ ಅಲ್ಲ ಎನ್ನುವುದನ್ನು ಇಂತಹ ಕೂಗುಮಾರಿ ಸಚಿವರು ತಿಳಿದುಕೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

Source: newsfirstlive.com Source link