ಅಫ್ಘಾನ್​ನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ.. ನೋಡಲ್ ಅಧಿಕಾರಿ ನೇಮಕ

ಅಫ್ಘಾನ್​ನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ.. ನೋಡಲ್ ಅಧಿಕಾರಿ ನೇಮಕ

ಬೆಂಗಳೂರು: ಅಫ್ಘಾನಿಸ್ತಾನವನ್ನ ತಾಲಿಬಾನಿಗಳು ವಶಪಡಿಸಿಕೊಂಡ ಬೆನ್ನಲ್ಲೇ ಇಡೀ ಅಫ್ಘಾನ್ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಿನ್ನೆಲೆ ಅಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ಕೇಂದ್ರ ಸರ್ಕಾರದಿಂದ ಹೆಲ್ಪ್​ಲೈನ್ ಆರಂಭ ಹಿನ್ನೆಲೆ ರಾಜ್ಯ ಸರ್ಕಾರದಿಂದ ನೋಡೆಲ್ ಅಧಿಕಾರಿ ನೇಮಕ ಮಾಡಲಾಗಿದೆ. ಸಿಐಡಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್​​ಕುಮಾರ್ ಅವರನ್ನ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸರ್ಕಾರದ ಒಳಾಡಳಿತ ಇಲಾಖೆಯ ಕಾರ್ಯದರ್ಶಿ ಎಂ.ಆರ್ ಶೋಭಾ ಈ  ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಯಿಂದ ಕನ್ನಡಿಗರನ್ನ ಕರೆತರಲು ನೋಡೆಲ್ ಅಧಿಕಾರಿ ನೇಮಕಗೊಳಿಸಲಾಗಿದೆ.

Source: newsfirstlive.com Source link