ಕಾರು, ಬೈಕ್ ಮಧ್ಯೆ ಅಪಘಾತ- ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಕಾರು, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ನಡೆದಿದೆ.

ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರನ್ನು ಗೋಪಾಲ ಮುತ್ನಾಳ(36), ರಾಮಣ್ಣ ಮಗ್ಗೆಪ್ಪಗೋಳ(40), ನೀಲವ್ವ ತಳವಾರ(44) ಎಂದು ಗುರುತಿಸಲಾಗಿದೆ. ಮೃತ ಗೋಪಾಲ, ರಾಮಣ್ಣ ಇಬ್ಬರೂ ಪಿ.ಜಿ ಹುಣಶ್ಯಾಳ ಗ್ರಾಮದ ನಿವಾಸಿಗಳು. ಮೃತ ಮಹಿಳೆ ನೀಲವ್ವ ತಳವಾರ ಮೂಡಲಗಿ ತಾಲೂಕಿನ ನಾಗನೂರು ನಿವಾಸಿ. ಮೊಹರಂ ಆಚರಣೆಗೆಂದು ಗೋಕಾಕ್ ತಾಲೂಕಿನ ಮಕ್ಕಳಗೇರಿ ಗ್ರಾಮಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ದೇವಸ್ಥಾನಗಳಿಗೆ ಆರ್ಥಿಕ ನೆರವು: ಚೆಕ್ ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಕಾರು, ಬೈಕ್ ಮಧ್ಯೆ ಅಪಘಾತ- ಮೂವರು ಸ್ಥಳದಲ್ಲೇ ಸಾವು

ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ಕಾರು ಡಿಕ್ಕಿಯಾಗಿ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್‍ಗೆ ಡಿಕ್ಕಿಯಾಗಿ ಕಾರು ಸಹ ಪಲ್ಟಿಯಾಗಿದ್ದು, ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Source: publictv.in Source link