ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ: ಸಚಿವ ನಿರಾಣಿ ಮೇಲೆ FIR ಸಾಧ್ಯತೆ

ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ: ಸಚಿವ ನಿರಾಣಿ ಮೇಲೆ FIR ಸಾಧ್ಯತೆ

ಬೆಂಗಳೂರು: ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಎದುರಿಸುತ್ತಿರುವ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್. ಆರ್.ನಿರಾಣಿ ಮೇಲೆ ಇಂದು ಕೊಡಿಗೇಹಳ್ಳಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸುವ ಸಾಧ್ಯತೆಗಳಿವೆ.

ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿ, ಸೆಪ್ಟೆಂಬರ್ 13 ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿತ್ತು.

ಇದನ್ನೂ ಓದಿ: ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ, ಕ್ಷಮೆ ಕೇಳಿದ್ದೇನೆ – ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

ಆ ಪ್ರಕಾರ ಇಂದು ಸಂಜೆ ವೇಳೆಗೆ ಸಚಿವರ ಮೇಲೆ ಎಫ್​ಐಆರ್ ದಾಖಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಳೆದ ವರ್ಷ ವಾಟ್ಸ್ ಆಪ್ ಗ್ರೂಪ್ ನಲ್ಲಿ ನಿರಾಣಿ ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶವೊಂದನ್ನು ರವಾನಿಸಿದ್ದರು ಎಂದು, ಆರೋಪಿಸಿ ಗೋವಿಂದರಾಮ್ ಎಂಬುವರು ಖಾಸಗಿ ದೂರು ದಾಖಲಿಸಿ, ಐಪಿಸಿ ಸೆಕ್ಷನ್ 153A, 295, 295-A‌ಅಡಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು.

Source: newsfirstlive.com Source link