ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

ನವದೆಹಲಿ: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್​ ರಿಲೀಫ್​​ ಸಿಕ್ಕಿದೆ. ಎಂಟು ವಾರಗಳ ಕಾಲ ಬಳ್ಳಾರಿ ಮತ್ತು ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಬಳ್ಳಾರಿಗೆ ಹೋಗಲು ಅನುಮತಿ ನೀಡುವಂತೆ ಜನಾರ್ದನ್​​ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಜಸ್ಟೀಸ್ ವಿನೀತ್ ಸಾರನ್ ನೇತೃತ್ವದ ನ್ಯಾಯಪೀಠ ಇದಕ್ಕೆ ಒಪ್ಪಿಗೆ ನೀಡಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ನೀಡುವಾಗ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಷರತ್ತು ಹಾಕಿತ್ತು. ಆದ್ದರಿಂದಲೇ ಜನಾರ್ದನ ರೆಡ್ಡಿ ಬೆಂಗಳೂರಿನ ನಿವಾಸದಲ್ಲಿಯೇ ಇದ್ದರು. ಈಗ ಕೊನೆಗೂ ಅವಕಾಶ ನೀಡಿರುವ ಸುಪ್ರೀಂಕೋರ್ಟ್​ 8 ವಾರಗಳ ಕಾಲ ಬಳ್ಳಾರಿಯಲ್ಲಿ ಉಳಿದುಕೊಳ್ಳಬಹುದು ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ: ನಾಡಬಂದೂಕು ಸಿಡಿಸಿ ಖೂಬಾಗೆ ಸ್ವಾಗತ- ಉನ್ನತ ಅಧಿಕಾರಗಳ ಬದಲು 3 ಕಾನ್ಸ್​ಟೇಬಲ್​ ಅಮಾನತು

Source: newsfirstlive.com Source link