ಕ್ಯಾಬಿನೆಟ್ ಉಪ-ಸಮಿತಿ ಪುನಾರಚನೆಗೆ ಸಂಪುಟ ಒಪ್ಪಿಗೆ

ಕ್ಯಾಬಿನೆಟ್ ಉಪ-ಸಮಿತಿ ಪುನಾರಚನೆಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಮಳೆಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಸೆಪ್ಟೆಂಬರ್ 13ರಿಂದ ವಿಧಾನಸಭೆ ಕಲಾಪ ನಡೆಯಲಿದೆ. ಬೆಂಗಳೂರಿನಲ್ಲಿಯೇ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು, ಈ ಸಭೆಯಲ್ಲಿ ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ..

ಇನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಕಾನೂನೂ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾಹಿತಿ ನೀಡಿದರು.

ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳು

  1. ಈ ಹಿಂದೆ ವಿಸರ್ಜನೆ ಆಗಿದ್ದ ಕ್ಯಾಬಿನೆಟ್ ಉಪ-ಸಮಿತಿಯ ಪುನಾರಚನೆ ಮಾಡಲು ಸಿಎಂಗೆ ಅಧಿಕಾರ
  2. ರಾಜ್ಯ ಮಾನಸಿಕ ಆರೋಗ್ಯ ಆರೈಕೆ ನಿಯಮಕ್ಕೆ ಅನುಮತಿ
  3. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿರುವ ಹದಿಹರೆಯದ ಬಾಲಕಿಯರಿಗೆ ಶುಚಿ ಕಾರ್ಯಕ್ರಮದಡಿಯಲ್ಲಿ ಸ್ಯಾನಿಟರಿ ಪ್ಯಾಡ್ ನೀಡುವ ಕಾರ್ಯಕ್ರಮಕ್ಕೆ 48 ಕೋಟಿ ರೂಪಾಯಿ ಬಿಡುಗಡೆಗೆ ಅನುಮೋದನೆ
  4. ಕಲಬುರಗಿ ಜಿಲ್ಲೆಯ ಆಳಂದದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 2.27 ಕೋಟಿ  ರೂಪಾಯಿ ಬಿಡುಗಡೆಗೆ ಅನುಮೋದನೆ
  5. 2859 ಆರೋಗ್ಯ ಉಪ ಕೇಂದ್ರಗಳನ್ನು, 478 ಕೋಟಿ ರೂ. ಗಳ ವೆಚ್ಚದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜಗೇರಿಸಲಾಗುತ್ತಿದ್ದು, ಒಟ್ಟು ಮೊತ್ತದ ಶೇಕಡಾ 60 ರಷ್ಟನ್ನು ಕೇಂದ್ರ ಸರ್ಕಾರ ಭರಿಸಲಿದೆ.

ಇದನ್ನೂ ಓದಿ: ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ: ಸಚಿವ ನಿರಾಣಿ ಮೇಲೆ FIR ಸಾಧ್ಯತೆ

Source: newsfirstlive.com Source link