ಬರೆದಿಟ್ಟುಕೊಳ್ಳಿ, ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ -ಭವಿಷ್ಯ ನುಡಿದ ಮಾಜಿ ಶಾಸಕ

ಬರೆದಿಟ್ಟುಕೊಳ್ಳಿ, ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ -ಭವಿಷ್ಯ ನುಡಿದ ಮಾಜಿ ಶಾಸಕ

ಧಾರವಾಡ: ಮಾಜಿ ಸಿಎಂ ಕುಮಾರಸ್ವಾಮಿ ಎಲ್ಲರ ಮನದಲ್ಲಿದ್ದಾರೆ. ಮುಂದಿನ 2023ರ ಚುನಾವಣೆಯಲ್ಲಿ ರಾಜ್ಯದ ಸಿಎಂ ಕುಮಾರಸ್ವಾಮಿಯವರೇ ಎಂದು ಜೆಡಿಎಸ್​ನ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಭವಿಷ್ಯ ನುಡಿದಿದ್ದಾರೆ.

blank

ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಯೋಗ ಹೇಗೆ ಬರುತ್ತೋ ಹಾಗೆ ನಡೆದುಕೊಳ್ಳುವವರು. ನಾವು ಮೇಜಾರಿಟಿಯ ಮೇಲೆ ಅಧಿಕಾರಕ್ಕೆ ಬರುವವರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವವರು ಕುಮಾರಸ್ವಾಮಿಯವರೇ. ಬೇಕಿದ್ದರೆ ಇವತ್ತಿನ ಈ ದಿನಾಂಕವನ್ನು ಬರೆದಿಟ್ಟುಕೊಳ್ಳಿ ಎಂದು ಕೋನರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ, ಕ್ಷಮೆ ಕೇಳಿದ್ದೇನೆ – ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ

Source: newsfirstlive.com Source link