ಕಾಮುಕ ವೃದ್ಧನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ

ಮಂಡ್ಯ: ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ 60 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ 60 ವರ್ಷದ ವೃದ್ಧ ಅದೇ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಅಂಗಡಿಯಲ್ಲಿ ತಿಂಡಿ ಕೊಡಿಸುವುದಾಗಿ ಪುಸಲಾಯಿಸಿದ್ದು, ಬಾಲಕಿ ವೃದ್ಧನ ಮಾತು ನಂಬಿ ಆತನ ಜೊತೆ ಹೋಗಿದ್ದಾಳೆ. ಬಳಿಕ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲು ವೃದ್ಧ ಮುಂದಾಗಿದ್ದಾನೆ. ವಿಷಯ ತಿಳಿದ ಪೋಷಕರು ಹಾಗೂ ಗ್ರಾಮಸ್ಥರು ವೃದ್ಧನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡ- ಇಬ್ಬರು ಸಾವು

ಬಳಿಕ ಈ ಬಗ್ಗೆ ಪೋಷಕರು ಹಾಗೂ ಗ್ರಾಮಸ್ಥರು ಮದ್ದೂರು ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಕಾಮುಕ ಮುದುಕನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ತೆರಳಿದ ಮಂಡ್ಯ ಎಸ್‍ಪಿ ಅಶ್ವಿನಿ, ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಕಿಚಕ ಮುದುಕನ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source: publictv.in Source link