ಜಾಮೀನು ಸಿಕ್ಕರೂ ಇಂದು ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಬಿಡುಗಡೆ ಭಾಗ್ಯವಿಲ್ಲ

ಜಾಮೀನು ಸಿಕ್ಕರೂ ಇಂದು ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಬಿಡುಗಡೆ ಭಾಗ್ಯವಿಲ್ಲ

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಾಕ್ಷ್ಯನಾಶ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ಜಾಮೀನು ಮಂಜೂರು ಆದ್ರು ಇಂದು ವಿನಯ್​ ಕುಲಕರ್ಣಿ ಅವರಿಗೆ ಬಿಡುಗಡೆಯ ಭಾಗ್ಯವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ವಿನಯ್​ ಕುಲಕರ್ಣಿ ಅವರ ಜಾಮೀನು ಆದೇಶ ಪ್ರತಿ ಹಿಂಡಲಗಾ ಜೈಲು ಅಧಿಕಾರಿಗಳಿಗೆ ತಲುಪಿಲ್ಲ ಎನ್ನಲಾಗಿದ್ದು, ಇದರಿಂದ ಬಿಡುಗಡೆ ಭಾಗ್ಯ ಇಲ್ಲ. ಪರಿಣಾಮ ನಾಳೆಯೇ ವಿನಯ್ ಕುಲಕರ್ಣಿ ಅವರ ಬಿಡುಗಡೆ ಸಾಧ್ಯತೆ ಇದೆ.

blank

ಬೆಳಗಾವಿ ಗ್ರಾಮೀಣ ಠಾಣೆ ಸಿಪಿಐ ಇಂದು ಹಿಂಡಲಗಾ ಜೈಲಿಗೆ ಭೇಟಿ ನೀಡಿ ತೆರಳಿದರು. ಜಾಮೀನು ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ ತಲುಪದ ಹಿನ್ನೆಲೆ, ಜಾಮೀನು ನೀಡುವ ವೇಳೆಗೆ ಸ್ಥಳೀಯ ಕೋರ್ಟ್‌ನಲ್ಲಿ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿರುವ ಮಾಹಿತಿ ಲಭ್ಯವಾಗಿದೆ. ಆದರೆ ಇಂದು ನ್ಯಾಯಾಲಯಕ್ಕೆ ರಜೆ ಹಿನ್ನೆಲೆ ಶ್ಯೂರಟಿ ಪಡೆದುಕೊಳ್ಳಲು ಸಾಧ್ಯವಾಗೋದಿಲ್ಲ. ಹೀಗಾಗಿ ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಡುಗಡೆ ಇಲ್ಲ ಎನ್ನಲಾಗಿದೆ.

ಇನ್ನು ಮಾಜಿ ಸಚಿವರು ಇಂದು ಬಿಡುಗಡೆ ಆಗೋದಿಲ್ಲ ಎಂಬ ಕಾರಣಕ್ಕೆ ಜೈಲು ಅಧಿಕಾರಿ ಹಾಗೂ ಸಿಪಿಐ ಸುನೀಲ್ ಕುಮಾರ್ ಚರ್ಚೆ ನಡೆಸಿ ಜೈಲಿನ ಬಳಿ ಏರ್ಪಡಿಸಿದ್ದ ಭದ್ರತೆ ವಾಪಸ್ ಪಡೆದುಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸರು, ಕೆಎಸ್‌ಆರ್‌ಪಿ ತುಕಡಿ ಹಿಂಡಲಗಾ ಜೈಲಿನಿಂದ ವಾಪಸ್​ ತೆರಳಿದೆ.

ಇದನ್ನೂ ಓದಿ: ಯೋಗೇಶ್​ ಗೌಡ ಕೊಲೆ ಕೇಸ್​: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಡುಗಡೆ ಭಾಗ್ಯ

Source: newsfirstlive.com Source link