ಸಿಂಧೂರಿ ವಿರುದ್ಧ ಮತ್ತೆ ಪ್ರತಾಪ್ ಸಿಂಹ ವಾಗ್ದಾಳಿ -IAS ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಒತ್ತಾಯ

ಸಿಂಧೂರಿ ವಿರುದ್ಧ ಮತ್ತೆ ಪ್ರತಾಪ್ ಸಿಂಹ ವಾಗ್ದಾಳಿ -IAS ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಒತ್ತಾಯ

ಮೈಸೂರು: ಐಎಎಸ್ ಅಧಿಕಾರಿ, ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಮತ್ತೊಮ್ಮೆ ವಾಗ್ದಾಳಿ ಮಾಡಿದ್ದಾರೆ.

ಮೈಸೂರಿನ ಹೊರ ವಲಯದಲ್ಲಿ ನಡೆದ ಕೈಗಾರಿಕೋದ್ಯಮಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಪ್ರತಾಪ್​ ಸಿಂಹ ಅವರು, ಐಎಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿಗೆ ಪ್ರತಾಪ್ ಸಿಂಹ ಮನವಿ ಮಾಡಿದರು.

ಐಎಎಸ್, ಐಪಿಎಸ್ ಅಧಿಕಾರಿಗಳು ಏನೂ ಕೆಲಸ ಮಾಡದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಅಧಿಕಾರಿಗಳು ಮಾಡಿದ ಕೆಲಸಗಳನ್ನ ಜಿಲ್ಲೆಯಿಂದ ಒಂದು ಅಕೌಂಟ್ ತೆರೆದು ಅದರಲ್ಲೂ ಮಾಹಿತಿ ಹಾಕಲಿ. ಫ್ಯಾನ್ಸ್ ಫೇಜ್ ಗಳಿಂದ ಹೊಗಳಿಕೆಗಳು ಸೃಷ್ಟಿಯಾಗಿದೆ.

ಯಾರೋ ಒಬ್ಬ ಲಾಠಿ ಹಿಡಿದು ಓಡಾಡಿದ್ರೆ ಹಾಗೆ ಹೀಗೆ ಅಂತ ಬಿಂಬಿಸಲಾಗುತ್ತಿದೆ. ಐಎಎಸ್, ಐಪಿಎಸ್ ಅಧಿಕಾರಿಗಳು ಉತ್ತಮ ಕೆಲಸಗಳನ್ನ ಮಾಡಬೇಕು. ಹಾಸನದಲ್ಲಿ ಕೇಂದ್ರ ಸರ್ಕಾರದಿಂದ ರಸ್ತೆ ನಿರ್ಮಾಣ ಮಾಡಬೇಕಾದರೆ ಅಂದಿನ ಜಿಲ್ಲಾಧಿಕಾರಿ ಸಹಕಾರ ನೀಡಲೇ ಇಲ್ಲ ಎಂದು ರೋಹಿಣಿ ಸಿಂಧೂರಿ ಅವರ ಹೆಸರನ್ನು ಪ್ರಸ್ತಾಪ ಮಾಡದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್, ಡಿಸಿ ಬಗಾದಿ ಗೌತಮ್, ರಾಜವಂಶಸ್ಥ ಯದುವೀರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Source: newsfirstlive.com Source link