ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ..- ಹೀಗಂದಿದ್ದೇಕೆ ಜಮೀರ್

ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ..- ಹೀಗಂದಿದ್ದೇಕೆ ಜಮೀರ್

ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ದಾಳಿಗೆ ಸಂಬಂಧಿಸಿದಂತೆ ಇಂದು ಟ್ವಿಟರ್​ನಲ್ಲಿ ಟ್ವೀಟ್ ಮಾಡಿರುವ ಜಮೀರ್.. ಇ.ಡಿ ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ ಎಂದಿದ್ದಾರೆ.

ಜಮೀರ್ ಹೇಳಿದ್ದೇನು..?

  1. ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ.
  2. ನಾನು ಮನೆಯನ್ನು ಕಟ್ಟಿಸಿದ್ದೆ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕಾಗಿ ನನ್ನ ಮೇಲೆ ಇ.ಡಿ ದಾಳಿಯಾಯಿತು. ಇ.ಡಿ ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ.
  3. ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ. ನನ್ನ ಆಸ್ತಿಯೂ ಅವರೇ. ಇ.ಡಿ ದಾಳಿಯಿಂದ ಹಲವರ ಅನುಮಾನಗಳು ಪರಿಹಾರವಾದದ್ದೇ ನನಗೆ ಖುಷಿಯ ವಿಚಾರ.

Source: newsfirstlive.com Source link