ರಾಜೀವ್ ಗಾಂಧಿ ಜನ್ಮ ದಿನಾಚರಣೆ; ತಂದೆಯ ಪುತ್ಥಳಿ, ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ರಾಹುಲ್ ಗಾಂಧಿ

ರಾಜೀವ್ ಗಾಂಧಿ ಜನ್ಮ ದಿನಾಚರಣೆ; ತಂದೆಯ ಪುತ್ಥಳಿ, ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ರಾಹುಲ್ ಗಾಂಧಿ

ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 77 ನೇ ಜನ್ಮದಿನಾಚರಣೆ. ಈ ಹಿನ್ನೆಲೆ ದೆಹಲಿಯ ಯೂತ್ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಛಾಯಾಚಿತ್ರ ಪ್ರದರ್ಶನ ಆಯೋಜಿಸಿದ್ದರು. ಈ ಛಾಯಾಚಿತ್ರ ಪ್ರದರ್ಶನದಲ್ಲಿ ರಾಜೀವ್ ಗಾಂಧಿಯವರ ವಿಶೇಷ ಫೋಟೋಗಳ ಸಂಗ್ರಹವನ್ನು ಪ್ರದರ್ಶನಕ್ಕೆ ಇಡಲಾಗಿದೆ.

blank

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಂದೆ ರಾಜೀವ್​ ಗಾಂಧಿಯವರ ವಿಶೇಷ ಫೋಟೋಗಳ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು. ಅಲ್ಲದೇ ಇದೇ ವೇಳೆ ಯೂತ್ ಕಾಂಗ್ರೆಸ್ ನಾಯಕರ ಬಗ್ಗೆ ರಾಹುಲ್ ಮೆಚ್ಚುಗೆಯ ಮಾತುಗಳನ್ನಾಡಿದರು.

blank

ಜೊತೆಗೆ ಯೂತ್ ಕಾಂಗ್ರೆಸ್ ಕಚೇರಿಯಲ್ಲಿ ನಿರ್ಮಿಸಲಾದ ರಾಜೀವ್ ಗಾಂಧಿ ಪುತ್ಥಳಿಯನ್ನೂ ರಾಹುಲ್ ಗಾಂಧಿ ರಿಬ್ಬನ್ ಕಟ್ ಮಾಡುವ ಮೂಲಕ ಅನಾವರಣಗೊಳಿಸಿದರು.

blank

blank

blank

Source: newsfirstlive.com Source link