ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಳ -ಆಂಧ್ರಪ್ರದೇಶದಲ್ಲಿ ನೈಟ್​ ಕರ್ಫ್ಯೂ ವಿಸ್ತರಣೆ

ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಳ -ಆಂಧ್ರಪ್ರದೇಶದಲ್ಲಿ ನೈಟ್​ ಕರ್ಫ್ಯೂ ವಿಸ್ತರಣೆ

ಆಂಧ್ರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಆಗ್ತಿದೆ. ಈ ಹಿನ್ನೆಲೆ ನೈಟ್​ ಕರ್ಫ್ಯೂವನ್ನು ವಿಸ್ತರಿಸಲಾಗಿದೆ. ಸೆಪ್ಟೆಂಬರ್ 4 ರವರೆಗೂ ನೈಟ್​ ಕರ್ಫ್ಯೂ ಜಾರಿಯಲ್ಲಿರುತ್ತದೆ ಅಂತಾ ಸಿಎಂ ಜಗನ್​ ಮೋಹನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಸದ್ಯ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೂ ನೈಟ್​ ಕರ್ಫ್ಯೂ ಜಾರಿಯಲ್ಲಿರುತ್ತದೆ.. ಮದುವೆ, ಧಾರ್ಮಿಕ ಸಭೆ ಸಮಾರಂಭಗಳಿಗೆ 150 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.. ಯಾರಾದರೂ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದರೆ, ಅಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕೇಸ್​ ದಾಖಲಿಸಲಾಗುದು ಅಂತ ಎಚ್ಚರಿಕೆ ನೀಡಿದ್ದಾರೆ.

ಕಳೆದ 24 ಗಂಟೆಯಲ್ಲಿ ಆಂಧ್ರ ಪ್ರದೇಶದಲ್ಲಿ 1,501 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು,10 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಉಳಿದಂತೆ ರಾಜ್ಯದಲ್ಲಿ 15,738 ಆ್ಯಕ್ಟಿವ್​ ಪ್ರಕರಣಗಳಿದೆ. ಇದುವರೆಗೂ 2.59 ಕೋವಿಡ್​ ಪರೀಕ್ಷೆಗಳನ್ನು ವೈದ್ಯರು ನಡೆಸಿದ್ದಾರೆ.

Source: newsfirstlive.com Source link