ಮೂವರು ಉಗ್ರರನ್ನು ಸದೆಬಡಿದ ಸೈನಿಕರು

ಶ್ರೀನಗರ: ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಷ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಭಾರತೀಯ ಸೇನೆ ಯೋಧರು ಹೊಡೆದುರುಳಿಸಿದ್ದಾರೆ.

ಜಮ್ಮು ಕಾಶ್ಮೀರದ ಅವಂತಿಪೂರದ ನಾಗಬೀರನ್ ಟ್ರಾಲ್ ಅರಣ್ಯ ಪ್ರದೇಶದ ಮೇಲ್ಭಾಗ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ಸೇನೆ ಹಾಗೂ ಪೊಲೀಸರ ಜಂಟಿ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು – ವಾಟ್ಸಪ್ ನಲ್ಲಿಯೇ ರೇಟ್ ಫೈನಲ್

ಜೈಷ್-ಇ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ನಡೆದ ಗುಂಡಿನ ಚಕಮಕಿ ವೇಳೆ ಸಹ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೆಡೆಮುರಿ ಕಟ್ಟಿದ್ದರು. ಅವಂತಿಪುರದ ಪಂಪೂರ್ ನಲ್ಲಿ ನಡೆದ ಘಟನೆಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳು ಸೇರಿದಂತೆ ದಾಳಿ ಮಾಡುವ ವಸ್ತುಗೋಳನ್ನು ವಶಪಡಿಸಿಕೊಂಡಿದ್ದರು.

Source: publictv.in Source link