ವೀಕೆಂಡ್ ಕರ್ಫ್ಯೂ ವಿರೋಧಿಸಿ ಮೈಸೂರಲ್ಲಿ ಪ್ರತಿಭಟನೆ

ಮೈಸೂರು: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆ ವಿವಿಧ ಸಂಘ, ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿ ನಗರದ ದೇವರಾಜ ಅರಸು ರಸ್ತೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿವೆ.

ದೇವರಾಜ ಅರಸು ರಸ್ತೆಯ ಮಳಿಗೆಗಳ ಮುಂಭಾಗದಲ್ಲಿ ಕಪ್ಪು ಬಟ್ಟೆ ಹಾಗೂ ಕಪ್ಪು ಪಟ್ಟಿಯನ್ನ ಧರಿಸಿ ಪ್ರತಿಭಟನೆ ನಡೆಸಿದರು. ವೀಕೆಂಡ್ ಕರ್ಫ್ಯೂ ಅನಗತ್ಯ ಹಾಗೂ ಅವೈಜ್ಞಾನಿಕವಾದದ್ದು, ಹೀಗಾಗಿ ಯಾವುದೇ ಕಾರಣಕ್ಕೂ ವೀಕೆಂಡ್ ಕರ್ಫ್ಯೂ ಮುಂದುವರಿಸಬಾರದು. ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿ ವ್ಯಾಪಾರಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಇಂದು 1,453 ಹೊಸ ಕೊರೊನಾ ಪ್ರಕರಣ, 17 ಮಂದಿ ಸಾವು

ತಕ್ಷಣವೇ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಬೇಕು, ಶನಿವಾರ ಹಾಗೂ ಭಾನುವಾರ ವ್ಯಾಪಾರ ಹೆಚ್ಚಾಗಿರುತ್ತದೆ. ಈ ಎರಡು ದಿನಗಳ ವ್ಯಾರ ಒಂದೇ, ವಾರದ ಉಳಿದ ಐದು ದಿನಗಳ ವ್ಯಾಪಾರವೂ ಒಂದೇ. ಮದುವೆ ಸಮಾರಂಭ ನಡೆಸುವ ಹಾಲ್‍ಗಳಿಗೂ ತೊಂದರೆಯಾಗಿದೆ. ಸರ್ಕಾರ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

 

Source: publictv.in Source link