ಅರಣ್ಯ ಅಧಿಕಾರಿಗಳಿಂದ ಎನ್​ಕೌಂಟರ್.. ಶ್ರೀಗಂಧದ ಮರ ಕಡಿಯುತ್ತಿದ್ದ ವ್ಯಕ್ತಿ ಸಾವು

ಅರಣ್ಯ ಅಧಿಕಾರಿಗಳಿಂದ ಎನ್​ಕೌಂಟರ್.. ಶ್ರೀಗಂಧದ ಮರ ಕಡಿಯುತ್ತಿದ್ದ ವ್ಯಕ್ತಿ ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ವ್ಯಾಪ್ತಿಯ ಕೆಂಕೆರೆ ಮೀಸಲು ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರ ಕಡಿಯುತ್ತಿದ್ದ ವ್ಯಕ್ತಿಯನ್ನ ಅರಣ್ಯ ಇಲಾಖೆ ಅಧಿಕಾರಿ ಎನ್​ಕೌಂಟರ್ ಮಾಡಿದ್ದಾರೆ.

ಇಬ್ಬರು ಶ್ರೀಗಂಧ ಮರ ಕಡಿಯುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ಕಣ್ಣಿಗೆ ಬಿದ್ದಿದ್ದಾರೆ. ಅಲ್ಲದೇ ಅಧಿಕಾರಿಗಳ ಮೇಲೆ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿ ಎನ್ಕೌಂಟರ್ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Source: newsfirstlive.com Source link