ಇನ್ನು ಹತ್ತು ದಿನಗಳ ಕಾಲ ರಾಜಕೀಯದಿಂದ ಸಿದ್ದರಾಮಯ್ಯ ದೂರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಇನ್ನು ಹತ್ತು ದಿನಗಳ ಕಾಲ ರಾಜಕೀಯದಿಂದ ದೂರ ಉಳಿಯಲಿದ್ದಾರೆ. ಇಂದಿನಿಂದ ಆಗಸ್ಟ್ 31ರ ವರೆಗೆ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡಯಲಿದ್ದಾರೆ.

ಇಂದು ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಆಗಸ್ಟ್ 31ರ ವರೆಗೆ ಅಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ. ಈ ಮೂಲಕ 10 ದಿನಗಳ ಕಾಲ ರಾಜಕೀಯದಿಂದ ಸಂಪೂರ್ಣ ದೂರವಿರಲಿರಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಜಿಂದಾಲ್‍ಗೆ ಹೊರಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಹೋಗುತ್ತಿದ್ದೇನೆ. 10 ದಿನಗಳ ಕಾಲ ನಾನು ಮನೆಯಲ್ಲಿ ಇರಲ್ಲ ಎಂದಿದ್ದಾರೆ. ಇದೇ ವೇಳೆ ನೆಹರು ಮತ್ತು ವಾಜಪೇಯಿ ಮಾದರಿ ನಾಯಕರು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಾಪ ಗಡ್ಕರಿ ಅವರು ಸತ್ಯ ಹೇಳಿದ್ದಾರೆ. ಸಿ.ಟಿ.ರವಿಗೆ ಸ್ವಲ್ಪ ಜ್ಞಾನೋದಯವಾದರೆ ಒಳ್ಳೆಯದು ಎಂದಿದ್ದಾರೆ.

Source: publictv.in Source link