ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್​ ಸಿಂಗ್(89)​ ಬಹುಅಂಗಾಂಗ ವೈಫಲ್ಯದಿಂದಾಗಿ ಇಂದು ನಿಧನರಾಗಿದ್ದಾರೆ.
ಕಲ್ಯಾಣ್ ಸಿಂಗ್ ಅವರನ್ನ ಜುಲೈ 4 ರಂದು ಲಖನೌನ SGPGI ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಲ್ಯಾಣ್ ಸಿಂಗ್ 2 ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 2014-2019ರ ಅವಧಿಯಲ್ಲಿ ರಾಜಸ್ಥಾನ್​ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಇನ್ನು ಕಲ್ಯಾಣ್ ಸಿಂಗ್ ಸಾವಿಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕಲ್ಯಾಣ್​ ಸಿಂಗ್ ಮಹಾನಾಯಕ, ಮಹಾನ್ ಮಾನವ. ಯುಪಿ ಅಭಿವೃದ್ಧಿಗೆ ಅಳಿಸಲಾಗದ ಕೊಡುಗೆ ನೀಡಿದ್ದಾರೆ. ಭಾರತೀಯ ಮೌಲ್ಯಗಳನ್ನ ಧೃಡವಾಗಿ ಬೇರೂರಿಸಿಕೊಂಡಿದ್ರು. ಅವರ ಮುಂದಿನ ಪೀಳಿಗೆಗಳು ಕೃತಜ್ಞರಾಗಿರುತ್ತಾರೆ ಎಂದು ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

Source: newsfirstlive.com Source link