ಪಿಸ್ತೂಲು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಗುಂಡು ಹಾರಿ ಪೇದೆ ಸಾವು

ಪಿಸ್ತೂಲು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಗುಂಡು ಹಾರಿ ಪೇದೆ ಸಾವು

ದಾವಣಗೆರೆ: ಪಿಸ್ತೂಲ್ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಪಿಸ್ತೂಲ್​ನಿಂದ ಗುಂಡು ಹಾರಿದ್ದು, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್ಸ್​ಸ್ಟೇಬಲ್ ಮೃತಪಟ್ಟ ದುರ್ಘಟನೆ ದಾವಣಗೆರೆಯ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯಲ್ಲಿ ನಡೆದಿದೆ.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನಗಿರಿಯ ಮೂಲದ ಚೇತನ್ ಮೃತಪಟ್ಟ ದುರ್ದೈವಿ ಆಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಈ ಘಟನೆ ಸಂಭವಿಸಿದ್ದು, ಮೃತ ಚೇತನ್​ 2012 ಜಿಲ್ಲಾ ಮೀಸಲು ಸಶಸ್ತ್ರ ಪಡೆಗೆ ಸೇರಿದ್ದರು.

ಚೇತನ್ ಬೆಳಗ್ಗೆ 11 ಗಂಟೆಗೆ ಆಗಮಿಸಿದ ವೇಳೆ ಪಿಸ್ತೂಲ್ ಸ್ವಚ್ಛಗೊಳಿಸುವಾಗ ಹಾರಿದ ಗುಂಡು ಕುತ್ತಿಗೆಗೆ ತಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಹತ್ತಿರದಲ್ಲಿಯೇ ಇರುವ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಕೂಡಲೇ ಕರೆದುಕೊಂಡು ಬಂದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ದಾವಣಗೆರೆ; ಫ್ರೀ ಸೈಟ್​​ ಕೊಡ್ತಿದ್ದಾರೆ ಅಂತ ಜಮಾಯಿಸಿದ ಸಾವಿರಾರು ಜನ

ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಭೇಟಿ ನೀಡಿದರು. ಇನ್ನು ಘಟನಾ ಸ್ಥಳಕ್ಕೆ ಐಜಿಪಿ ರವಿ ಭೇಟಿ ಪರಿಶೀಲನೆ ನಡೆಸಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದು ಇಲಾಖೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. 5 ವರ್ಷಗಳ ಹಿಂದೆಯಷ್ಟೆ ಮದುವೆಯಾಗಿದ್ದ ಚೇತನ್ ಗೆ ಒಂದು ಗಂಡು ಮಗುವಿದ್ದು, ಕುಟುಂಬಸ್ಥರಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚೇತನ್ ಮರಣಕ್ಕೆ ಜಿಲ್ಲಾ ಪೊಲೀಸರು ಸಂತಾಪ ಸೂಚಿಸಿದ್ದಾರೆ.

Source: newsfirstlive.com Source link