ಆರು ಜಿಲ್ಲೆಗಳ ರಸ್ತೆಗೆ ದಿವಂಗತ ಕಲ್ಯಾಣ್ ಸಿಂಗ್ ಹೆಸರು

ಲಕ್ನೋ: ಮಾಜಿ ಮುಖ್ಯಮಂತ್ರಿ, ದಿವಂಗತ ಕಲ್ಯಾಣ್ ಸಿಂಗ್ ಹೆಸರನ್ನು ಉತ್ತರ ಪ್ರದೇಶದ ಆರು ಜಿಲ್ಲೆಗಳ ರಸ್ತೆಗೆ ಇಡಲಾಗುತ್ತಿದೆ.

ಲಕ್ನೋ ಮತ್ತು ಅಯೋಧ್ಯೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ.

ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇದಕ್ಕಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಲಿದ್ದು, ಅಯೋಧ್ಯೆ, ಲಕ್ನೋ, ಅಲಿಗಡ, ಇಟಾಹ್, ಬುಲಂದ್ ಶಹರ್ ಮತ್ತು ಪ್ರಯಾಗರಾಜ್ ನಲ್ಲಿ ತಲಾ ಒಂದು ಪಿಡಬ್ಲ್ಯೂಡಿ ಮುಖ್ಯ ರಸ್ತೆಗೆ ಕಲ್ಯಾಣ್ ಸಿಂಗ್ ಹೆಸರಿಡಲಾಗುವುದು ಎಂದು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಹೇಳಿದರು. ಪಿಡಬ್ಲ್ಯುಡಿ ಅಧಿಕಾರಿಗಳು ಶೀಘ್ರದಲ್ಲೇ ಈ ಕುರಿತು ಪ್ರಸ್ತಾವನೆ ಕಳುಹಿಸುತ್ತಾರೆ ಎಂದು ಅವರು ಹೇಳಿದರು. ಇದನ್ನೂ ಓದಿ:  ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಗ್ ಶನಿವಾರ ರಾತ್ರಿ ಇಲ್ಲಿನ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು. ಆರು ಜಿಲ್ಲೆಗಳಲ್ಲಿ ಒಂದೊಂದು ರಸ್ತೆಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ.

Source: publictv.in Source link