ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅರಾಜಕತೆ; ಸರ್ವಪಕ್ಷ ಸಭೆ ಕರೆದ ಮೋದಿ

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅರಾಜಕತೆ; ಸರ್ವಪಕ್ಷ ಸಭೆ ಕರೆದ ಮೋದಿ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಉಂಟಾಗಿರುವ ಅರಾಜಕತೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಅಗಸ್ಟ್ 26 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ತಾಲಿಬಾನಿಗಳು ಅಫ್ಘಾನಿಸ್ತಾನ ದೇಶವನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಜಗತ್ತಿನ ಎಲ್ಲಾ ರಾಷ್ಟ್ರಗಳು ಆತಂಕ ವ್ಯಕ್ತಪಡಿಸಿವೆ.

ಅದರಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಗಸ್ಟ್​ 11 ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಇನ್ನು ಪ್ರಧಾನಿ ಮೋದಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಆಫ್ಘಾನ್ ಪರಿಸ್ಥಿತಿ ಕುರಿತು ಮಾಹಿತಿ ಕೇಳಿದ್ದಾರೆ.

ಇನ್ನು ಅಫ್ಘಾನ್​​ನಲ್ಲಿ ಸಿಲುಕಿರುವ ಭಾರತೀಯರನ್ನ ಕರೆದುಕೊಂಡು ಬರುವ ಪ್ರಕ್ರಿಯೆಗಳು ಜೋರಾಗಿ ನಡೆಯುತ್ತಿದೆ. ಮೋದಿ ನೇತೃತ್ವದ ಸಭೆಯಲ್ಲಿ ಭಾರತೀಯರನ್ನ ಕರೆದುಕೊಂಡು ಬರುವ ಬಗ್ಗೆಯೂ ಚರ್ಚೆ ನಡೆಯಲಿದೆ. ಇದುವರೆಗೆ ಅಫ್ಘಾನ್​ನಿಂದ ಇದುವರೆಗೆ 730 ಮಂದಿಯನ್ನ ಭಾರತಕ್ಕೆ ಕರೆದುಕೊಂಡು ಬರಲಾಗಿದೆ. ಅವರಲ್ಲಿ ಅಫ್ಘಾನ್ ಸಿಖ್​​ರೂ ಕೂಡ ಒಳಗೊಂಡಿದ್ದಾರೆ.

Source: newsfirstlive.com Source link