ಸಾರಿಗೆ ನೌಕರರ ಸಂಬಳಕ್ಕೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಸಾರಿಗೆ ನೌಕರರ ಸಂಬಳಕ್ಕೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಬಳಕ್ಕಾಗಿ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿದೆ. ಒಟ್ಟು 60.82 ಕೋಟಿ ಹಣವನ್ನ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಆದೇಶ ಹೊರಡಿಸಿದ್ದಾರೆ.

blank

KSRTC, ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಸಿಬ್ಬಂದಿ ಜುಲೈ ತಿಂಗಳ ಸಂಬಳಕ್ಕಾಗಿ ಶೇಕಡ 25% ರಷ್ಟು ಹಣವನ್ನ ನೀಡಿದೆ. KSRTCಗೆ 27.74 ಕೋಟಿ, ವಾಯುವ್ಯ ಸಾರಿಗೆ ನಿಗಮಕ್ಕೆ 17.48 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ 15.61 ಕೋಟಿ ಹಣವನ್ನ ಬಿಡುಗಡೆ ಮಾಡಿದೆ.

Source: newsfirstlive.com Source link