ಹನುಮಂತರಾಯ್​​ಗೆ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ

ಹನುಮಂತರಾಯ್​​ಗೆ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹನುಮಂತರಾಯ್ ಬಿರಾದಾರ್ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯ ಯುವ ಮೋರ್ಚಾ ಅಧ್ಯಕ್ಷರಾದ ಡಾ.ಸಂದೀಪ್ ಅವರು ತಿಳಿಸಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಜಮಖಂಡಿಯವರಾದ ಹನುಮಂತರಾಯ್ ಬಿರಾದಾರ್ ಅವರು, ಜಮಖಂಡಿ ಸೇವಾ ಪ್ರತಿಷ್ಠಾನದ ಸ್ಥಾಪಕರಾಗಿದ್ದು, ನಮೋ ಬ್ರಿಗೇಡ್, ಯುವ ಮೋರ್ಚಾ ಮೂಲಕ ಹತ್ತಾರು ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕೋವಿಡ್ ಸಂದರ್ಭದಲ್ಲೂ ಅವರು ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು ಎಂದು ಡಾ.ಸಂದೀಪ್ ತಿಳಿಸಿದ್ದಾರೆ.

Source: newsfirstlive.com Source link