ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ: ಹಾಲಪ್ಪ ಆಚಾರ್

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ಅದನ್ನು ತಡೆಯುವ ಕೆಲಸ ಮಾಡಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 1980ರಲ್ಲಿ 256 ಗಣಿಗಾರಿಕೆಗೆ ಕೆಆರ್‌ಎಸ್‌ ಸುತ್ತಮುತ್ತ ಹಾಗೂ ಮಂಡ್ಯದಲ್ಲಿ ಅವಕಾಶ ನೀಡಲಾಗಿತ್ತು. ಇದೀಗ ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ. ಅದನ್ನು ತಡೆಯುವ ಕೆಲಸ ಮಾಡಿದ್ದೇವೆ. ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ನಿಂತಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ: ಸುಮಲತಾ

ಗಣಿ ಮಾಲೀಕರು ರಿನಿವಲ್ ಮಾಡಿ ಗಣಿಗಾರಿಕೆ ನಡೆಸಲು ಅವಕಾಶ ಕೊಡಿ ಎಂದು ಕೇಳಿದ್ದಾರೆ. ನಾವು ಅಲ್ಲಿ ಪರಿಶೀಲನೆ ಮಾಡಿದ ಬಳಿಕ ನಿರ್ಧಾರ ಮಾಡುತ್ತೇವೆ. ಅಲ್ಲಿ ಗಣಿಗಾರಿಕೆ ಮಾಡುವುದರಿಂದ ಕೆಆರ್‌ಎಸ್‌ಗೆ ಸಮಸ್ಯೆ ಆಗುತ್ತಾ, ಇಲ್ವಾ ಅನ್ನೋದನ್ನು ಪರೀಕ್ಷೆ ಮಾಡಬೇಕಾಗುತ್ತದೆ. ಜಿಲ್ಲಾಧಿಕಾರಿಗಳ ಜೊತೆ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ. ಸದ್ಯ ಯಾವುದೇ ಗಣಿಗಾರಿಕೆ ನಡೆಯುತ್ತಿಲ್ಲ ಎಂದರು. ಇದನ್ನೂ ಓದಿ: ಬೇಬಿ ಬೆಟ್ಟದಲ್ಲಿ ಸ್ಫೋಟಕಗಳು ಪತ್ತೆ

Source: publictv.in Source link