ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿಎಂಟಿಸಿಯಿಂದ ವಜಾ

ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿಎಂಟಿಸಿಯಿಂದ ವಜಾ

ಬೆಂಗಳೂರು: ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್. ಆರ್​. ಅವರನ್ನು ಬಿಎಂಟಿಸಿ ಯಿಂದ ವಜಾ ಮಾಡಿ ದಕ್ಷಿಣ ವಿಭಾಗೀಯ ನಿಯಂತ್ರಣಾಧಿಕಾರಿ ಎಂ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿ ಘಟಕ 33 ರಲ್ಲಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಚಂದ್ರಶೇಖರ್, ಇದೆ ಏಪ್ರಿಲ್ ನಲ್ಲಿ ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿ, ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾಗಿರುವ ಮತ್ತು ಸಹ ನೌಕರರನ್ನು ಮುಷ್ಕರಕ್ಕೆ ಪ್ರಚೋದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಜಾ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮುಷ್ಕರ ನಡೆದು 4 ತಿಂಗಳ ಬಳಿಕ ಬಿಎಂಟಿಸಿಯಿಂದ ಕ್ರಮ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಸಂಬಳಕ್ಕೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಇನ್ನು ಒಂದು ವರ್ಷದಲ್ಲಿ 300ಕ್ಕೂ ಹೆಚ್ಚು ದಿನ ರಜೆ ಪಡೆದಿರುವ ಪ್ರಕರಣದ ಬಗ್ಗೆಯೂ ಚಂದ್ರಶೇಖರ್​ ವಿರುದ್ಧ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಕುರಿತು ನ್ಯೂಸ್​ಫಸ್ಟ್​ಗೆ ಪ್ರತಿಕ್ರಿಯಿಸಿದ ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಡಾ. ಅರುಣ್, ಚಂದ್ರಶೇಖರ್​ ಅವರು ಸಹ ನೌಕರರನ್ನು ಮುಷ್ಕರಕ್ಕೆ ಪ್ರಚೋದಿಸಿರುವ ಮತ್ತು ಅನಧಿಕೃತವಾಗಿ ಮುಷ್ಕರದಲ್ಲಿ ಭಾಗಿಯಾಗಿರುವುದಕ್ಕೆ ವಜಾ ಮಾಡಲಾಗಿದೆ. ಮತ್ತು ವರ್ಷದಲ್ಲಿ 300 ಕ್ಕೂ ಹೆಚ್ಚು ರಜೆಗಳನ್ನು ಪಡೆದಿದ್ದು, ಆ ಕುರಿತು ವಿಚಾರಣೆ ನಡೆಯುತ್ತಿದೆ ಎಂದರು.

blank

 

Source: newsfirstlive.com Source link