ಸ್ನಾನಕ್ಕೆಂದು ಹೊಳೆಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸ್ನಾನಕ್ಕೆಂದು ಹೊಳೆಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಉಡುಪಿ: ಸ್ನಾನಕ್ಕೆಂದು ಹೊಳೆಗೆ ತೆರಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ‌ ಬೈಂದೂರಿನ ಆರ್ಡಿ ಗ್ರಾಮದಲ್ಲಿ ನಡೆದಿದೆ.‌

ಅಲ್ಬಾಡಿ ಗ್ರಾಮದ ನಿವಾಸಿಗಳಾದ ಮೋಹನ ನಾಯ್ಕ್ (22) ಹಾಗೂ ಸುರೇಶ (19) ಮೃತ ದುರ್ದೈವಿಗಳು. ನಿನ್ನೆ ಸಂಜೆ ಮನೆಯ ಸಮೀಪದ  ಹೊಳೆಗೆ ಯುವಕರಿಬ್ಬರು ಸ್ನಾನಕ್ಕೆಂದು ನೀರಿಗೆ ಇಳಿದಾಗ, ನೀರಿನ ಸೆಳೆತಕ್ಕೆ ಸಿಕ್ಕಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇನ್ನು ಮೃತ ಯುವಕರು ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ, ಆತಂಕಗೊಂಡ ಕುಟುಂಬಸ್ಥರು ಹೊಳೆ ಬಳಿ ಬಂದಾಗ ಇಬ್ಬರ ಮೃತ ದೇಹಪತ್ತೆಯಾಗಿದೆ ಎನ್ನಲಾಗಿದೆ. ಶಂಕರನಾರಾಯಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಇಂದು ಆನಂದ್ ಸಿಂಗ್ ರಾಜೀನಾಮೆ ಸಾಧ್ಯತೆ

Source: newsfirstlive.com Source link