ಸಾರಿಗೆ ನೌಕರರ ವಜಾ ಆದೇಶ ವಾಪಸ್​ ಪಡೆಯುವಂತೆ ಸಿಎಂಗೆ ಚಂದ್ರಶೇಖರ್ ಮನವಿ

ಸಾರಿಗೆ ನೌಕರರ ವಜಾ ಆದೇಶ ವಾಪಸ್​ ಪಡೆಯುವಂತೆ ಸಿಎಂಗೆ ಚಂದ್ರಶೇಖರ್ ಮನವಿ

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ಕೆಲ‌ ಸಾರಿಗೆ ನೌಕರರ ವಜಾ ಮಾಡಿ ಇಲಾಖೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದ ತಂಡ, ಆದೇಶ ವಾಪಸ್​ ಪಡೆದುವಂತೆ ಮನವಿ ಸಲ್ಲಿಸಿದ್ದಾರೆ.

ಇಂದು ಆರ್.ಟಿ ನಗರದ ಸಿಎಂ ನಿವಾಸದಲ್ಲಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಚಂದ್ರಶೇಖರ್​, ಮುಷ್ಕರದ ವೇಳೆ ವಜಾಗೊಂಡಿದ್ದ ನೌಕರರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಅಲ್ಲದೇ ಜುಲೈ ತಿಂಗಳಿನ ವೇತನ ಬಿಡುಗಡೆಗೂ ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ಕಳೆದ ಏಪ್ರಿಲ್​​​ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಮಾಡಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಪರಿಣಾಮ ಮುಷ್ಕರದಲ್ಲಿ ಭಾಗಿಯಾಗಿದ್ದ 2,109 ಸಾರಿಗೆ ನೌಕರರನ್ನು ವಜಾ ಮಾಡಿ, ಸುಮಾರು 500ಕ್ಕೂ ಹೆಚ್ಚು ನೌಕರರನ್ನು ದೂರದ ಸ್ಥಳಗಳಿಗೆ ವರ್ಗಾವಣೆ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು.

Source: newsfirstlive.com Source link