ಯತ್ನಾಳ್ ವಿರುದ್ಧ ಅವಹೇಳನಾಕಾರಿ ಪೋಸ್ಟರ್ -‘ಕೈ’ ಕಾರ್ಯಕರ್ತ ಪೊಲೀಶ್​ ವಶಕ್ಕೆ

ಯತ್ನಾಳ್ ವಿರುದ್ಧ ಅವಹೇಳನಾಕಾರಿ ಪೋಸ್ಟರ್ -‘ಕೈ’ ಕಾರ್ಯಕರ್ತ ಪೊಲೀಶ್​ ವಶಕ್ಕೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಶಾಸಕರ ಕೊಠಡಿಯ ಬಾಗಿಲಿಗೆ ಅವಾಚ್ಯವಾಗಿ ನಿಂದಿಸಿದ ಪೋಸ್ಟರ್ ಅಂಟಿಸಿದ ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮನೋಹರ್ ತಂಡದಲ್ಲಿರುವ ಕಾರ್ಯಕರ್ತ ಚೆಲುವರಾಜು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಯತ್ನಾಳ್ ಗಾಂಧಿ ಕುಟುಂಬದವರ ವಿರುದ್ಧ ಅವಹೇಳನಕಾರಿ ಮಾತನಾಡುತ್ತಿದ್ದಾರೆ ಎಂಬ ಹಿನ್ನಲೆಯಲ್ಲಿ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಕಾರ್ಯಕರ್ತ ಚೆಲುವರಾಜು ಆಕ್ರೋಶ ವ್ಯಕ್ತಪಡಿಸಿದ್ದರು. ಶಾಸಕರ ಭವನದಲ್ಲಿರುವ ಯತ್ನಾಳ್ ಕೊಠಡಿಗೆ ಭಿತ್ತಿಪತ್ರ ಅಂಟಿಸಿ ಪ್ರತಿಭಟನೆ ನಡೆಸಿದ್ದರು. ಆದರೆ ಭಿತ್ತಿಪತ್ರದಲ್ಲಿ ಯತ್ನಾಳ್ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಲಾಗಿತ್ತು. ಅಂದಹಾಗೇ, ರಾಹುಲ್ ಗಾಂಧಿಯವರನ್ನು ಹುಚ್ಚ ಎಂದು ಯತ್ನಾಳ್ ಸಂಭೋದಿಸಿದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದರು.

ಇದನ್ನೂ ಓದಿ; ಮತ್ತೊಂದು ವಿವಾದಕ್ಕೆ ಕಿಡಿ ಹಚ್ಚಿದ ಕಾಂಗ್ರೆಸ್​ -ಯತ್ನಾಳ್ ವಿರುದ್ಧ ಅವಹೇಳನಾಕಾರಿ ಪೋಸ್ಟರ್ ಅಂಟಿಸಿ ಆಕ್ರೋಶ

Source: newsfirstlive.com Source link