ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ ರೇಪ್; ಚಾಮುಂಡಿ ಬೆಟ್ಟದ ಬಳಿಯೇ ದುಷ್ಕೃತ್ಯ

ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ ರೇಪ್; ಚಾಮುಂಡಿ ಬೆಟ್ಟದ ಬಳಿಯೇ ದುಷ್ಕೃತ್ಯ

ಮೈಸೂರು: ಸಾಂಸ್ಕೃತಿಕ ನಗರಿ ಎನ್ನಿಸಿಕೊಂಡಿರುವ ಮೈಸೂರಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ‌ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ.

ಸ್ನೇಹಿತನ ಜೊತೆ ಚಾಮುಂಡಿಬೆಟ್ಟಕ್ಕೆ ವಿದ್ಯಾರ್ಥಿನಿ ತೆರಳಿದ ವೇಳೆ ಘಟನೆ ನಡೆದಿದ್ದು ನಾಲ್ವರು ಕಾಮುಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು.. ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Source: newsfirstlive.com Source link