ಹಾಡುಹಗಲೇ ಬಿಜೆಪಿ ಕಾರ್ಪೊರೇಟರ್ ಮೇಲೆ ಶಿವಸೇನೆ ಕಾರ್ಯಕರ್ತರಿಂದ ಹಲ್ಲೆ

ಹಾಡುಹಗಲೇ ಬಿಜೆಪಿ ಕಾರ್ಪೊರೇಟರ್ ಮೇಲೆ ಶಿವಸೇನೆ ಕಾರ್ಯಕರ್ತರಿಂದ ಹಲ್ಲೆ

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿಕೆ ನೀಡಿದ ಹಿನ್ನೆಲೆ ರಾಣೆಯವರನ್ನ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ನಂತರ ರಾಣೆಯವರಿಗೆ ಸಿವಿಲ್ ಕೋರ್ಟ್ ಜಾಮೀನು ನೀಡಿದೆ.

ಇದನ್ನೂ ಓದಿ: BREAKING: ಕೇಂದ್ರ ಸಚಿವರನ್ನೇ ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

ಘಟನೆ ಇಷ್ಟಕ್ಕೇ ಕೊನೆಯಾಗದೆ ತಮ್ಮ ನಾಯಕನ ವಿರುದ್ಧ ಹೇಳಿಕೆ ನೀಡಿದ್ದನ್ನ ಖಂಡಿಸಿ ಶಿವಸೇನಾ ಕಾರ್ಯಕರ್ತರು ಬಿಜೆಪಿ ಕಾರ್ಪೊರೇಟರ್ ಓರ್ವನ ಮೇಲೆ ಹಾಡುಹಗಲೇ ಹಲ್ಲೆ ನಡೆಸಿದ್ದಾರೆ. ಮಹಾರಾಷ್ಟ್ರದ ಉಲ್ಲಾಸ್​ನಗರದಲ್ಲಿ ಈ ಘಟನೆ ನಡೆದಿದ್ದು, ಹತ್ತಾರು ಕಾರ್ಯಕರ್ತರು ಕಾರ್ಪೊರೇಟರ್​ನನ್ನ ಮನಬಂದಂತೆ ಥಳಿಸಿದ್ದಾರೆ. ಅಲ್ಲದೇ ಕಾರ್ಪೊರೇಟರ್ ಮೇಲೆ ಮಸಿಯನ್ನೂ ಎರಚಲಾಗಿದೆ ಎಂಬ ಮಾಹಿತಿ ಇದೆ.

blank

ಇದನ್ನೂ ಓದಿ: 20 ವರ್ಷಗಳ ನಂತರ ಮೊದಲ ಬಾರಿಗೆ ಕೇಂದ್ರ ಸಚಿವರೊಬ್ಬರು ಅರೆಸ್ಟ್..! ಬಿಜೆಪಿ ತೀವ್ರ ಖಂಡನೆ

ಶಿವಸೇನೆ ಕಾರ್ಯಕರ್ತರಿಂದ ಹಲ್ಲೆಗೊಳಗಾದ ಕಾರ್ಪೊರೇಟರ್ ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ನಂತರ ಕೆಲವರು ಅವರನ್ನ ಆರೈಕೆ ಮಾಡಿ ರಕ್ಷಣೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Source: newsfirstlive.com Source link