ಮೈಸೂರಲ್ಲಿ ಗ್ಯಾಂಗ್ ರೇಪ್​: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಮೈಸೂರಲ್ಲಿ ಗ್ಯಾಂಗ್ ರೇಪ್​: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಮೈಸೂರು: ಸಾಂಸ್ಕೃತಿಕ ನಗರಿ ಎನ್ನಿಸಿಕೊಂಡಿರುವ ಮೈಸೂರಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ‌ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ.

ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ.. ಈಗಾಗಲೇ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯಕೀಯ ಕ್ರಮಗಳನ್ನ ಸರ್ಕಾರ ಕೈಗೊಂಡಿದೆ. ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮಗಳನ್ನ ಕೈಗೊಳ್ಳಲು ಡಿಜಿಪಿಗೆ ಸೂಚಿಸಿದ್ದೇನೆ. ವಿದ್ಯಾರ್ಥಿನಿ ಹೇಳಿಕೆ ಆಧಾರ ಮೇರೆಗೆ ತನಿಖೆ ನಡೆಸಲು ಸೂಚನೆ ಕೊಟ್ಟಿದ್ದೇನೆ ಅಂತಾ ಹೇಳಿದರು.

ಇದನ್ನೂ ಓದಿ: ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ ರೇಪ್; ಚಾಮುಂಡಿ ಬೆಟ್ಟದ ಬಳಿಯೇ ದುಷ್ಕೃತ್ಯ

Source: newsfirstlive.com Source link