ಭೀಕರ ಅಪಘಾತ; ಮೀನಿನ ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ

ಭೀಕರ ಅಪಘಾತ; ಮೀನಿನ ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ

ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಬಸ್ ಹಾಗೂ ಮೀನಿನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಎರಡೂ ವಾಹನಗಳ ಚಾಲಕರಿಗೆ ಗಾಯಗಳಾಗಿವೆ.

ಮೀನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಹಾಗೂ ಅಂಕೋಲಾದಿಂದ ಕಾರವಾರ ಕಡೆಗೆ ಬರುತ್ತಿದ್ದ ಬಸ್​ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಚಾಲಕ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದ.. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನನ್ನ ಹೊರಗೆ ತೆಗೆದಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Source: newsfirstlive.com Source link