ಬಾಳೆಗುಳಿ ಬಳಿ ಭೀಕರ ಅಪಘಾತ- ಲಾರಿಯಲ್ಲಿ ಸಿಲುಕಿದ ಚಾಲಕ

ಕಾರವಾರ: ಬಸ್ ಹಾಗೂ ಮೀನು ಸಾಗಿಸುವ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕ ವಾಹನದಲ್ಲಿಯೇ ಸಿಲುಕಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಷ್ಟ್ರೀಯ ಹೆದ್ದಾರಿ ಬಾಳೆಗುಳಿ ಕ್ರಾಸ್ ನಲ್ಲಿ ನಡೆದಿದೆ.

ಅಂಕೋಲಾದಿಂದ ಕಾರವಾರ ಕಡೆಗೆ ಬರುತ್ತಿದ್ದ ಬಸ್, ಯಲ್ಲಾಪುರದಿಂದ ಅಂಕೋಲ ಭಾಗಕ್ಕೆ ಹೋಗುತಿದ್ದ ಲಾರಿಗೆ ಅತೀ ವೇಗದಲ್ಲಿ ಡಿಕ್ಕಿ ಹೊಡೆದಿದೆ. ಹೊಡದ ರಭಸಕ್ಕೆ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದ ಚಾಲಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಇದನ್ನೂ ಓದಿ: ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ

ಅಪಘಾತದಲ್ಲಿ ಲಾರಿ ಜಖಂ ಆಗಿದ್ದು, ಬಸ್ ಮುಂಭಾಗ ಸಹ ಹಾನಿಯಾಗಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.

Source: publictv.in Source link