ಮೈಸೂರಲ್ಲಿ ಗ್ಯಾಂಗ್ ರೇಪ್​: ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ -ಸಿದ್ದರಾಮಯ್ಯ

ಮೈಸೂರಲ್ಲಿ ಗ್ಯಾಂಗ್ ರೇಪ್​: ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ -ಸಿದ್ದರಾಮಯ್ಯ

ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​​ ಮಾಡಿದ್ದಾರೆ. ಈ ಮೂಲಕ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದು ದುರದೃಷ್ಟಕರ ಎಂದಿದ್ದಾರೆ.

ಸಂತ್ರಸ್ಥೆ ಹಾಗೂ ಕುಟುಂಬ ಪರ ನಾವು ನಿಲ್ಲುತ್ತೇವೆ ಎಂದಿರುವ ಸಿದ್ದರಾಮಯ್ಯ, ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಒತ್ತಾಯಿಸಿದ್ದಾರೆ.

ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ‌ ಸಂಖ್ಯೆ‌ ಹೆಚ್ಚಾಗುತ್ತಿದೆ.‌ ಮುಖ್ಯಮಂತ್ರಿಗಳು ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ‌ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ 24ನೇ ತಾರೀಕಿನಂದು ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ 6 ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಇದನ್ನೂ ಓದಿ: ರೈತರಿಗೆ ಸಿಹಿಸುದ್ದಿ ನೀಡಿದ ಮೋದಿ; ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹290 ನಿಗದಿ

Source: newsfirstlive.com Source link