ಪಂಚಮಸಾಲಿಗೆ 2A ಮೀಸಲಾತಿ; ಇಂದಿನಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾದ ಸಮುದಾಯ

ಪಂಚಮಸಾಲಿಗೆ 2A ಮೀಸಲಾತಿ; ಇಂದಿನಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾದ ಸಮುದಾಯ

ಚಾಮರಾಜನಗರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ ತಯಾರಿ ನಡೆಸಿದೆ.

ಚಾಮರಾಜನಗರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದಿಂದ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ‌ ಚಾಲನೆ ನೀಡಲಾಗುತ್ತದೆ ಎನ್ನಲಾಗಿದೆ. ರಾಜ್ಯ ಮಟ್ಟದ ಪ್ರತಿಜ್ಞಾ ಪಂಚಾಯತ್ ಇದಾಗಿದ್ದು ಇದಕ್ಕ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಲಿದ್ದಾರಂತೆ.

ಇದನ್ನೂ ಓದಿ: ಸೆ.15ರೊಳಗೆ 2ಎ ಮೀಸಲಾತಿ ಸಿಗಬೇಕು -ಬೊಮ್ಮಾಯಿಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಪ್ರತಿಜ್ಞಾ ಪಂಚಾಯತ್ ಅಭಿಯಾನದಲ್ಲಿ ಶಾಸಕ‌ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸೇರಿದಂತೆ ಅನೇಕ ಪಂಚಮಸಾಲಿ ಮುಖಂಡರು ಭಾಗಿಯಾಗಲಿದ್ದು ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕೆಂದು ಒತ್ತಾಯಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೀಸಲಾತಿ ಹೋರಾಟ.. ನಾನು ಡ್ರೈವರ್.. ಕಾಶಪ್ಪನವರ್ ಕಂಡಕ್ಟರ್ -ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಮೀಸಲಾತಿಗೆ ಈಗಾಗಲೇ ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಾರೆ. ಇಂದಿನಿಂದ ಪ್ರತಿದಿನ ಮೂರು ತಾಲೂಕುಗಳಲ್ಲಿ ಜಾಗೃತಿ ಅಭಿಯಾನ ನಡೆಯಲಿದ್ದು ಸೆಪ್ಟೆಂಬರ್​ 30 ರವರೆಗೂ ಜಾಗೃತಿ ಮೂಡಿಸಲಿದ್ದಾರೆ ಎಂದು ಹೇಳಲಾಗಿದೆ.

Source: newsfirstlive.com Source link