ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಪಂಚಮಸಾಲಿ ಸಮುದಾಯ

ಚಾಮರಾಜನಗರ: 2ಎ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪಂಚಮಸಾಲಿ ಸಮುದಾಯ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ.

ಚಾಮರಾಜನಗರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದಿಂದ ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಇಂದಿನಿಂದ ಚಾಲನೆ ದೊರೆಯಲಿದ್ದು, ಇಂದು ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ: ಕಾಶಪ್ಪನವರ್

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ಸಲುವಾಗಿ ಪ್ರತಿಜ್ಞಾ ಪಂಚಾಯತ್ ಅಭಿಯಾನವನ್ನು ಆರಂಭಿಸುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸೇರಿದಂತೆ ಅನೇಕರು ಪಂಚಮಸಾಲಿ ಮುಖಂಡರು ಭಾಗಿಯಾಗುವ ನಿರೀಕ್ಷೆ ಇದೆ. ಪಂಚಮಸಾಲಿ ಮೀಸಲಾತಿಗೆ ಈಗಾಗಲೇ ಪಾದಯಾತ್ರೆ ಮಾಡಿರುವ ಜಯಮೃತ್ಯುಂಜಯ ಸ್ವಾಮೀಜಿ, ಇಂದಿನಿಂದ ಪ್ರತಿದಿನ ಮೂರು ತಾಲೂಕುಗಳಲ್ಲಿ ಜಾಗೃತಿ ಅಭಿಯಾನ ಕೈಗೊಳ್ಳಲಿದ್ದಾರೆ. ಇಂದಿನಿಂದ ಸೆಪ್ಟಂಬರ್ 30 ರವರೆ ನಿರಂತರ ಈ ಜಾಗೃತಿ ಅಭಿಯಾನ ನಡೆಯಲಿದೆ. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ದುಂಡು ಮೇಜಿನ ಸಭೆಯಲ್ಲಿ ಪಂಚ ನಿರ್ಣಯ ಪಾಸ್

Source: publictv.in Source link