ಫೈಟರ್ ಸಾವು ಕೇಸ್​​​; ಇಂದು ಅಜಯ್​​ ರಾವ್​​ ನಿರೀಕ್ಷಣಾ ಜಾಮೀನು ಅರ್ಜಿ ಭವಿಷ್ಯ ನಿರ್ಧಾರ

ಫೈಟರ್ ಸಾವು ಕೇಸ್​​​; ಇಂದು ಅಜಯ್​​ ರಾವ್​​ ನಿರೀಕ್ಷಣಾ ಜಾಮೀನು ಅರ್ಜಿ ಭವಿಷ್ಯ ನಿರ್ಧಾರ

ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಸ್ಯಾಂಡಲ್‌ವುಡ್ ಕೃಷ್ಣ ಅಜಯ್ ರಾವ್ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್​​ಗೆ ಬಂಧನ ಭೀತಿ ಶುರುವಾಗಿದೆ. ಹೀಗಾಗಿ ನಟ ಅಜಯ್ ರಾವ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಅಜಯ್ ರಾವ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ಕೋರ್ಟ್​ ಅಂತಿಮ ತೀರ್ಪು ಪ್ರಕಟಿಸಲಿದೆ.

ಫೈಟರ್​​ ವಿವೇಕ್​ ಸಾವು ಪ್ರಕರಣ ಸಂಬಂಧ ದಾಖಲಾದ ಎಫ್‌ಐಆರ್‌ನಲ್ಲಿ ಅಜಯ್ ರಾವ್ ಹೆಸರನ್ನು ಇತರೆ ಆರೋಪಿಗಳು ಎಂದು ನಮೂದಿಸಿದ್ದರು. ಹಾಗಾಗಿ ನಿರೀಕ್ಷಣಾ ಜಾಮೀನಿಗೆ ಅಜಯ್ ರಾವ್ ಅರ್ಜಿ ಸಲ್ಲಿಸಿದ್ದಾರೆ. ರಾಮನಗರ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅಜಯ್ ರಾವ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಅಜಯ್ ರಾವ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಈಗಾಗಲೇ ಪ್ರಕರಣ ಸಂಬಂಧ ನಿರ್ದೇಶಕ ಶಂಕರ್, ಸಾಹಸ ನಿರ್ದೇಶಕ ವಿನೋದ್, ಕ್ರೇನ್ ಚಾಲಕ ಮಹಾದೇವ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ನಿರ್ಮಾಪಕ ಹಾಗೂ ಪ್ರೊಡಕ್ಷನ್ ಮ್ಯಾನೇಜರ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​ನಿಂದ್ ಆಪರೇಷನ್ ಹಸ್ತಕ್ಕೆ ಅಸ್ತು.. 2 ಡಜನ್​ಗೂ ಹೆಚ್ಚು ನಾಯಕರಿಗೆ ಕೈ ಗಾಳ..?

Source: newsfirstlive.com Source link