ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಕೂರಿಸಬಾರದು- ಬಿಬಿಎಂಪಿ ಖಡಕ್ ಎಚ್ಚರಿಕೆ

ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಕೂರಿಸಬಾರದು- ಬಿಬಿಎಂಪಿ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಹಬ್ಬದ ಸಂಭ್ರಮಕ್ಕೆ ಬಿಬಿಎಂಪಿ ಕೊಕ್ಕೆ ಹಾಕಿದೆ. ಕೊರೋನಾ ತೀವ್ರಗೊಳ್ಳುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಕೂರಿಸಬಾರದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಗೌರವ್ ಗುಪ್ತಾ, ಕಳೆದ ವರ್ಷದಂತೆ ಈ ವರ್ಷವೂ ಗಣಪತಿ ಹಬ್ಬಕ್ಕೆ ಪಾಲಿಕೆಯಿಂದ ನಿರ್ಬಂಧ ಹೇರಲಾಗಿದೆ. ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಹಬ್ಬ ಆಚರಣೆ ಮಾಡಿದ್ರೆ ಕ್ರಮ ತೆಗೆದುಕೊಳ್ಳುತ್ತೇವೆ. ಕೋವಿಡ್ ಸೋಂಕು ಹೆಚ್ಚಳ ಆತಂಕದಿಂದ ಹಬ್ಬಕ್ಕೆ ತಡೆಗೆ ಆದೇಶಿಸಿದ್ದೇವೆ ಎಂದರು.

ಕೇರಳದಲ್ಲಿ ಸೋಂಕು ಹೆಚ್ಚಳವಾಗಿದೆ. ಹೀಗಾಗಿ ಬೆಂಗಳೂರಲ್ಲೂ ಸೋಂಕು ಹೆಚ್ಚಳದ ಆತಂಕ ಮೂಡಿದೆ. ಕೇರಳದಲ್ಲಿ ಸೋಂಕು ಹೆಚ್ಚಳದಿಂದ ಆತಂಕ ವ್ಯಕ್ತಪಡಿಸಿದ ಗೌರವ ಗುಪ್ತಾ, ರಾಜ್ಯದ ಗಡಿಭಾಗದಲ್ಲಿ ಸರ್ಕಾರ ಈಗಾಗಲೇ ಕಠಿಣ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ. ಅಂತೆಯೇ ಬೆಂಗಳೂರಲ್ಲಿ ಸೋಂಕು ತಡೆಗೆ ಇನ್ನಷ್ಟು ಎಚ್ಚರಿಕೆ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಭವಿಷ್ಯದ ಮೈತ್ರಿಗೆ ಮುನ್ನುಡಿ ಬರೀತಾ ದಳ-ಕಮಲ ?

ನಗರದಲ್ಲಿ ಕೋವಿಡ್ ರೂಲ್ಸ್ ಜನ ಕಟ್ಟುನಿಟ್ಟಿನಿಂದ ಪಾಲಿಸಬೇಕು. ಬೆಂಗಳೂರಿನಲ್ಲಿ ಈಗಾಗಲೆ ಶೇಕಡ 75ರಷ್ಟು ವ್ಯಾಕ್ಸಿನ್ ಪಡೆಯಲಾಗಿದೆ. ಇನ್ನುಳಿದ ಜನರಿಗೂ ಆದಷ್ಟು ಬೇಗ ವ್ಯಾಕ್ಸಿನ್ ನೀಡುವ ಗುರಿ ಹೊಂದಿದ್ದೇವೆ ಎಂದು ಹೇಳಿದರು.

Source: newsfirstlive.com Source link