ಅತ್ಯಾಚಾರ ಯುವತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಹೇಳಿಕೆ ಹಿಂಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಅತ್ಯಾಚಾರ ಯುವತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಹೇಳಿಕೆ ಹಿಂಪಡೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅತ್ಯಾಚಾರ ಯುವತಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಯನ್ನು ವಾಪಸ್ಸು ಪಡೆದಿರುವುದಾಗಿ ಹೇಳಿದ್ದಾರೆ. ನಗರದ ಪರಪ್ಪನ ಅಗ್ರಹಾರ ಭೇಟಿಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿಯ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿ, ನನಗೂ ಆ ಹೇಳಿಕೆ ನೀಡಿದ ಬಳಿಕ ತುಂಬಾ ನೋವಾಗಿದೆ, ಬೊಮ್ಮಾಯಿಯಯವರ ಸರ್ಕಾರ ಎಲ್ಲ ಹೆಣ್ಣು ಮಕ್ಕಳ ಪ್ರಾಣ ಮಾನ ಕಾಪಾಡುವ ಬದ್ಧತೆ ಹೊಂದಿದೆ, ಎಂದು ಹೇಳಿ ಹೇಳಿಕೆ ವಾಪಸ್ಸು ಪಡೆದಿರುವುದಾಗಿ ತಿಳಿಸಿದರು.

ಇದನ್ನೂ ಓದಿ:  ಕಾಂಗ್ರೆಸ್​ನವರು ನನ್ನ ರೇ** ಮಾಡೋಕೆ ಪ್ರಯತ್ನಿಸ್ತಿದ್ದಾರೆ -ಗೃಹ ಸಚಿವ ಆರಗ ಜ್ಞಾನೇಂದ್ರ

ಮೈಸೂರಿನಲ್ಲಿ ನಡೆದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ.. ಅತ್ಯಾಚಾರಕ್ಕೆ ಒಳಗಾಗಿರುವ ಯುವತಿ ಅಲ್ಲಿಗೆ ಹೋಗಬಾರದಿತ್ತು ಅಂತಾ ಹೇಳಿಕೆ ನೀಡಿದ್ದರು. ಈ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಒಬ್ಬ ರಾಜ್ಯದ ಗೃಹಮಂತ್ರಿಯಾಗಿ ಎಂತಹ ಹೇಳಿಕೆ ನೀಡಿದ್ದಾರೆಂದು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.. ಸಚಿವರ ವಿರುದ್ದ ಪ್ರತಿಭಟನೆಗಳು ಆರಂಭವಾದ ಬೆನ್ನಲ್ಲೇ ಸಚಿವರು ಹೇಳಿಕೆ ವಾಪಸ್ಸು ಪಡಿದ್ದಾರೆ.

Source: newsfirstlive.com Source link