ಆಕ್ಷೇಪಾರ್ಹ ಹೇಳಿಕೆ ಕುರಿತು ಸ್ಪಷ್ಟೀಕರಣ ನೀಡುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ -ಸಿಎಂ ಬೊಮ್ಮಾಯಿ

ಆಕ್ಷೇಪಾರ್ಹ ಹೇಳಿಕೆ ಕುರಿತು ಸ್ಪಷ್ಟೀಕರಣ ನೀಡುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ -ಸಿಎಂ ಬೊಮ್ಮಾಯಿ

ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಡಿಜಿಪಿ ಪ್ರವೀಣ್ ಸೂದ್ ಮತ್ತು ಮೈಸೂರು ಪೊಲೀಸ್​ ಆಯುಕ್ತರಿಗೆ ಸೂಚನೆ ನೀಡಿದ್ದೆನೆ ಎಂದಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಕರಣ ಕುರಿತು ಪ್ರವೀಣ್​ ಸೂದ್​ ಜೊತೆ ಮಾತಾಡಿದ್ದು, ಪ್ರಕರಣ ಗಂಭಿರವಾಗಿ ಪರಿಗಣಿಸಬೇಕು ಅಂತ ಹೇಳಿದ್ದೆನೆ. ಮತ್ತು ವಿಶೇಷ ತಂಡ ರಚನೆ ಮಾಡಿ ಕಾನೂನು ಕ್ರಮಕೈಗೊಳ್ಳಲು ನಿರ್ದೇಶಿಸಿರುವುದಾಗಿ ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ರಾಯಚೂರಲ್ಲಿ 59 ಬಾಲ ಕಾರ್ಮಿಕರ ರಕ್ಷಣೆ; ಮಕ್ಕಳ ಕಳ್ಳ ಸಾಗಾಣಿಕೆ ಕಾಯ್ದೆಯಡಿ ಕೇಸ್

ಇನ್ನು ಯುವತಿ ಕುರಿತ ಆಕ್ಷೇಪಾರ್ಹ ಹೇಳಿಕೆ ಮತ್ತು ಕಾಂಗ್ರೆಸ್ ನವರು ನನ್ನನ್ನ ರೇಪ್ ಮಾಡ್ತಿದ್ದಾರೆ ಎಂಬ ಗೃಹ ಸಚಿವರ ಹೇಳಿಕೆ ಕುರಿತು ಮಾತನಾಡಿದ ಅವರು, ಗೃಹ ಸಚಿವರ ಒಟ್ಟಾರೆಯ ಹೇಳಿಕೆಗೆ ಸಂಬಂಧಿಸಿದಂತೆ ನನ್ನ ಸಹಮತವಿಲ್ಲ ಎಂದಿದ್ದು, ಕೂಡಲೆ ಈ ಬಗ್ಗೆ ಸ್ಪಷ್ಟಿಕರಣ ಕೊಡೊದಕ್ಕೆ ಗೃಹ ಸಚಿವರಿಗೆ ಸೂಚಿಸಿದ್ದೆನೆ, ಮತ್ತು ಪ್ರಕರಣದ ಕುರಿತು ನನಗೆ ನೇರವಾಗಿ ಮಾಹಿತಿ ನೀಡುವಂತೆ ಸೂಚಿಸಿದ್ದೆನೆ ಎಂದರು.

Source: newsfirstlive.com Source link