ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಕಠಿಣ ಕ್ರಮ: ಸಿಎಂ

ನವದೆಹಲಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳು ಯಾರೇ ಆಗಿರಲಿ, ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಸ್ಪಷ್ಟ ಆದೇಶ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ. ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ನನಗೇ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರು, ಎಡಿಜಿಪಿ ಪ್ರತಾಪ್ ರೆಡ್ಡಿ ಹಾಗೂ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರ ಜೊತೆ ಮಾತನಾಡಿದ್ದೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ನನ್ನ ಮಾತನ್ನು ವಾಪಸ್ ಪಡೆಯುತ್ತೇನೆ – ಕ್ಷಮೆಯಾಚಿಸಿದ ಗೃಹ ಸಚಿವ

ಈ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ತನಿಖೆ ಚುರುಕಾಗಿ ನಡೆಯುತ್ತಿದೆ. ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡುತ್ತಾರೆ ಎಂದು ಅವರು ಹೇಳಿದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!

Source: publictv.in Source link