Big breaking: ಕಾಬೂಲ್ ಸರಣಿ ಸ್ಫೋಟದಲ್ಲಿ ಅಮೆರಿಕದ 4 ಸೈನಿಕರು ಹುತಾತ್ಮ

Big breaking: ಕಾಬೂಲ್ ಸರಣಿ ಸ್ಫೋಟದಲ್ಲಿ ಅಮೆರಿಕದ 4 ಸೈನಿಕರು ಹುತಾತ್ಮ

ಕಾಬೂಲ್​ನಲ್ಲಿ ಇಂದು ನಡೆದ ಸರಣಿ ಸ್ಫೋಟದಲ್ಲಿ ಅಮೆರಿಕದ ನಾಲ್ವರು ಸೈನಿಕರು ಸಾವನ್ನಪ್ಪಿದ್ದಾರೆ ಅಂತಾ ಯುಎಸ್​ ಅಧಿಕಾರಿಗಳು ದೃಢಪಡಿಸಿದ್ದಾರೆ. ಅಲ್ಲದೇ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಅಂತಾ ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟ ಪ್ರಕರಣದಲ್ಲಿ ಮೃತರಾದವರಲ್ಲಿ ಅಫ್ಘಾನಿಸ್ತಾನದ ನಾಗರಿಕರೇ ಹೆಚ್ಚಿದ್ದಾರೆ. ತಾಲಿಬಾನಿಗಳ ಕಿರುಕುಳಕ್ಕೆ ಬೆಚ್ಚಿಬಿದ್ದಿದ್ದ ಅಫ್ಘಾನ್ ನಾಗರಿಕರು ಪಲಾಯನ ಮಾಡಲು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. 120 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Source: newsfirstlive.com Source link