ಅರಗ ಜ್ಞಾನೇಂದ್ರಗೆ ಅಲ್ಪನಿಗೆ ಐಶ್ವರ್ಯ ಸಿಕ್ಕ ಹಾಗೇ ಆಗಿದೆ: ಬಿ.ಕೆ ಸಂಗಮೇಶ್

ಚಿಕ್ಕಮಗಳೂರು: ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಟೀಕಿಸಿದ್ದಾರೆ.

ಗ್ಯಾಂಗ್ ರೇಪ್‍ನಲ್ಲಿ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅವರಿಗೆ ಫಿಟ್ ಆಗಿತ್ತು. ಶಾಂತಿ ಕಾಪಾಡೋದನ್ನು ಬಿಟ್ಟು, ಅಶಾಂತಿ ಮೂಡಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದೆ. ಅಶಾಂತಿ ಮೂಡಿಸುವ ಗೃಹ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿರುವುದು ದುರಾದೃಷ್ಟ ಎಂದರು. ಇದನ್ನೂ ಓದಿ: ಮೈಸೂರು ಘಟನೆಗೆ ಸಮಾಜ ತಲೆ ತಗ್ಗಿಸಬೇಕೇ ಹೊರತು ಸರ್ಕಾರವಲ್ಲ: ಬಿಸಿ ನಾಗೇಶ್

ಪ್ರಚೋದನೆ ಮೂಡಿಸಲು ರೀತಿ ಹೇಳಿಕೆ ನೀಡಿದ್ದಾರೆ. ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನಮ್ಮ ಪಕ್ಷದ ಮೇಲೆ ದೂರನ್ನು ಹೇಳುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ಮಾಹಿತಿಗಳಿಲ್ಲ. ಅದಕ್ಕೆ ಈ ರೀತಿಯ ಹೇಳಿಕೆಗಳನ್ನು ನೀಡಿ ಅಶಾಂತಿಯನ್ನು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ:ಗ್ಯಾಂಗ್ ರೇಪ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸೋಮಶೇಖರ್

 

ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಮಾಹಿತಿ ನೀಡುವ ಮೂಲಕ ತೇಜೋವಧೆ ಮಾಡಲು ಹೋಗುತ್ತಿದ್ದಾರೆ. ಆದರೆ ಜನರು ನಮ್ಮ ಪರ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು ಸರ್ಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Source: publictv.in Source link