ಒಬ್ಬ ವ್ಯಕ್ತಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು.. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ- ಉಮೇಶ್ ಕತ್ತಿ

ಒಬ್ಬ ವ್ಯಕ್ತಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು.. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ- ಉಮೇಶ್ ಕತ್ತಿ

ಚಾಮರಾಜನಗರ: ಒಬ್ಬ ವ್ಯಕ್ತಿಗೆ ತಿಂಗಳಿಗೆ 5 ಕೆ.ಜಿ. ಆಹಾರ ಧಾನ್ಯ ಇದ್ದರೆ ಸಾಕು ಅಂತ ಸಚಿವ ಉಮೇಶ್‌ ಕತ್ತಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವ್ರು, ಅನರ್ಹ ಫಲಾನುಭವಿಗಳ ಪತ್ತೆಗಾಗಿ E-KYC ಜಾರಿ ಮಾಡಲಾಗಿದೆ ಅಂತ ಹೇಳಿದ್ರು. ರಾಜಕೀಯ ಕಾರಣಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಅಂದಿದ್ದಾರೆ.. ಆದ್ರೆ ಒಬ್ಬ ವ್ಯಕ್ತಿಗೆ ಪ್ರತಿ ತಿಂಗಳಿಗೆ 5 ಕೆಜಿ ಆಹಾರ ಧಾನ್ಯವಿದ್ರೆ ಸಾಕು ಅಂತ ಆಹಾರ ಸಚಿವ ಉಮೇಶ್‌ ಕತ್ತಿ ಹೇಳಿದ್ರು. ಇನ್ನು ಹೆಚ್ಚುವರಿ ಆಹಾರ ಧಾನ್ಯದಿಂದ ಸರ್ಕಾರದ ಬೊಕ್ಕಸಕ್ಕೂ ಹೊರೆಯಾಗುತ್ತೆ ಅಂತ ಹೇಳಿದ್ದಾರೆ.

Source: newsfirstlive.com Source link