ಮೈಸೂರಿನಲ್ಲಿ ದರೋಡೆ ಶೂಟ್‍ಔಟ್ ಪ್ರಕರಣ – ಇಬ್ಬರ ಬಂಧನ

ಮೈಸೂರು: ಅರಮನೆ ನಗರಿಯಲ್ಲಿ ನಡೆದ ದರೋಡೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ರಾಜಸ್ಥಾನ ಮೂದವರು ಎಂದು ಗುರುತಿಸಲಾಗಿದೆ. ಆಗಸ್ಟ್ 23 ರಂದು ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್‍ನಲ್ಲಿ ದರೋಡೆ ಶೂಟ್‍ಔಟ್ ನಡೆದಿತ್ತು. ಇದನ್ನೂ ಓದಿ: ಚಾಮುಂಡಿ ತಾಯಿ ದರ್ಶನ ಪಡೆದ ಗೃಹ ಸಚಿವ ಅರಗ ಜ್ಞಾನೇಂದ್ರ

ಮಾಲೀಕನಿಗೆ ಥಳಿಸಿ ಚಿನ್ನಾಭರಣ ದರೋಡೆ ಮಾಡಲಾಗಿತ್ತು. ಅಲ್ಲದೆ ಚಿನ್ನದ ಅಂಗಡಿಗೆ ಬಂದಿದ್ದ ಚಂದ್ರುಗೆ ಗುಂಡೇಟು ನೀಡಲಾಗಿತ್ತು. ಪರಿಣಾಮ ದಡದಹಳ್ಳಿ ಗ್ರಾಮದ ಚಂದ್ರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ದರೋಡೆಕೋರರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Source: publictv.in Source link