ನಾಳೆಯಿಂದ ಸಿಇಟಿ ಪರೀಕ್ಷೆ – ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯಾದ್ಯಂತ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ರಾಜ್ಯದ 530 ಕೇಂದ್ರಗಳಲ್ಲಿ ಆಗಸ್ಟ್ 28ರಿಂದ 30ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ರಾಜ್ಯದ 530 ಕೇಂದ್ರಗಳಲ್ಲಿ ಪರೀಕ್ಷೆಗೆ ಭರದ ಸಿದ್ಧತೆ ನಡೆಸಲಾಗಿದ್ದು, ರಾಜ್ಯದ 6 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಕೋವಿಡ್ ಮಾರ್ಗಸೂಚಿ ಅನುಸರಿಸಿ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, 530 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಆಗಸ್ಟ್ 28ರಂದು ಜೀವಶಾಸ್ತ್ರ ಮತ್ತು ಗಣಿತ. ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ, ಆಗಸ್ಟ್ 30ರಂದು ಹೊರನಾಡು ಮತ್ತು ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಿಗದಿ ಮಾಡಲಾಗಿದೆ. ಈ ಪರೀಕ್ಷೆಗೆ 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ

ಪರೀಕ್ಷೆ ದಿನಗಳಂದು ಗೃಹ ಇಲಾಖೆಯು ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಿದ್ದು, 530 ವೀಕ್ಷಕರು, 1,060 ವಿಶೇಷ ಜಾಗೃತ ದಳದ ಸದಸ್ಯರನ್ನು ಆಯೋಜಿಸಲಾಗಿದೆ. ಜೊತೆಗೆ 530 ಪ್ರಶ್ನೆಪತ್ರಿಕೆ ಪಾಲಕರು, 8,409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡಯಲಿದೆ. 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದು, ಉಳಿದ 444 ಕೇಂದ್ರಗಳು ಇನ್ನುಳಿದ ಜಿಲ್ಲೆಗಳಲ್ಲಿವೆ. ಇದನ್ನೂ ಓದಿ: ಅರಗ ಜ್ಞಾನೇಂದ್ರ ನೆಗೆಟಿವ್ ಆಗಿ ಹೇಳಿಕೆ ಕೊಟ್ಟಿಲ್ಲ: ಪೂರ್ಣಿಮಾ ಶ್ರೀನಿವಾಸ್

ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು:
ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಮಾನ್ಯತೆ ಇರುವ ಕಾಲೇಜಿನ ಗುರುತಿನ ಚೀಟಿ ದ್ವಿತೀಯ ಪಿಯುಸಿ ಪ್ರವೇಶ ಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಇವುಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಹೋಗಬೇಕು.

Source: publictv.in Source link