ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚರಕ್ಕೀಡಾದ ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ ಎಂದು ತಿಳಿದು ಬಂದಿದೆ. ಪೋಷಕರು ಭೇಟಿ ನೀಡಿ ಖಾಸಗಿ ಆಸ್ಪತ್ರೆಯಿಂದ ಸಂತ್ರಸ್ತೆಯನ್ನು ಡಿಸ್ಚಾರ್ಜ್​​ ಮಾಡಿಕೊಂಡು ಹೋಗಿದ್ದಾರೆ ಎಂದು ಎನ್ನಲಾಗುತ್ತಿದೆ.

ನಿನ್ನೆ ಸಂಜೆಯೇ ಹಲ್ಲೆಗೊಳಗಾದ ಯುವಕ ಡಿಸ್ಚಾರ್ಜ್​​ ಆಗಿದ್ದ. ಇಂದು ಮಧ್ಯಾಹ್ನ 12.30ಕ್ಕೆ ಸಂತ್ರಸ್ತೆ ಡಿಸ್ಚಾರ್ಜ್​ ಆಗಿದ್ದಾರೆ. ಇನ್ನು, ಪೊಲೀಸರಿಗೆ ಹೇಳಿಕೆ ನೀಡಲು ನಿರಾಕರಿಸಿದ ಸಂತ್ರಸ್ತೆ, ಪೋಷಕರೊಂದಿಗೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ನ್ಯೂಸ್​ಫಸ್ಟ್​​​ಗೆ ಉನ್ನತ ಮೂಲಗಳ ಮಾಹಿತಿ ನೀಡಿವೆ.

ಇದನ್ನೂ ಓದಿ: ಮೈಸೂರು ಬೆನ್ನಲ್ಲೇ ಬೆಳಗಾವಿಯಲ್ಲಿ ಮತ್ತೊಂದು ಕೇಸ್​​; ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Source: newsfirstlive.com Source link