ಟೋಕಿಯೊ 2020 ಪ್ಯಾರಾಲಿಂಪಿಕ್ಸ್: ಟೇಬಲ್ ಟೆನ್ನಿಸ್ ಆಟಗಾರ್ತಿ ಚಿನ್ನ ಗೆಲ್ಲಲು ಒಂದೇ ಹೆಜ್ಜೆ ಬಾಕಿ

ಟೋಕಿಯೊ 2020 ಪ್ಯಾರಾಲಿಂಪಿಕ್ಸ್: ಟೇಬಲ್ ಟೆನ್ನಿಸ್ ಆಟಗಾರ್ತಿ ಚಿನ್ನ ಗೆಲ್ಲಲು ಒಂದೇ ಹೆಜ್ಜೆ ಬಾಕಿ

ಟೋಕಿಯೊ 2020 ಪ್ಯಾರಾಲಿಂಪಿಕ್ಸ್ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾವಿನ ಪಟೇಲ್ ಫೈನಲ್ ತಲುಪಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲಲು ಕೇವಲ ಒಂದು ಹೆಜ್ಜೆ ದೂರದಲ್ಲಿದ್ದಾರೆ.

ಇಂದು ನಡೆದ ಸೆಮಿಫೈನಲ್‌ನಲ್ಲಿ ಚೀನಾದ ವಿಶ್ವ ಮೂರನೇ ಶ್ರೇಯಾಂಕಿತ ಆಟಗಾರ್ತಿ ಮಿಯಾವೋರನ್ನ ಸೋಲಿಸಿದ್ದಾರೆ. ತೀವ್ರ ಜಿದ್ದಾಜಿದ್ದಿನಿಂದ ಸಾಗಿದ್ದ ಈ ಸ್ಪರ್ಧೆಯಲ್ಲಿ ಭಾವಿನಾ ಪಟೇಲ್, 3-2 (7-11, 11-7, 11-4, 9-11, 11-8) ಮಿಯಾವೋರನ್ನ ಮಣಿಸಿ ಫೈನಲ್​​ಗೆ ಲಗ್ಗೆ ಇಟ್ಟರು.. ಈ ಮೂಲಕ ಪ್ಯಾರಾಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಟೇಬಲ್ ಟೆನಿಸ್ ಆಟಗಾರ್ತಿ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ, ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಮೊದಲ ಪದಕವನ್ನು ಖಚಿತಪಡಿಸಿದ್ದಾರೆ.

Source: newsfirstlive.com Source link